ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿ ಸೀಲ್ ಡೌನ್ ಹಿನ್ನೆಲೆ

Advt_Headding_Middle

 

ಸುಬ್ರಹ್ಮಣ್ಯ ಗ್ರಾ.ಪಂ.ನಲ್ಲಿ ಕೊರೋನಾ ಕಾರ್ಯಪಡೆ ಸಭೆ

ತುರ್ತು ಸೇವೆಗೆ ಗ್ರಾ.ಪಂ ಸದಸ್ಯರನ್ನು ಅಥವಾ ಪಂಚಾಯತ್‌ನ್ನು ಸಂಪರ್ಕಿಸಲು ಕೋರಿಕೆ

ಸುಬ್ರಹ್ಮಣ್ಯ ಗ್ರಾ.ಪಂ ನಲ್ಲಿ ಇಂದು ಕೊರೋನಾ ಕಾರ್ಯಪಡೆ ಸಭೆ ನಡೆಸಲಾಯಿತು.

ಗ್ರಾ.ಪಂ ಅಧ್ಯಕ್ಷೆ ಲಲಿತಾ ಗುಂಡಡ್ಕ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಗ್ರಾಪಂ ಉಪಾಧ್ಯಕ್ಷೆ ಸವಿತಾ ಭಟ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಎಸ್ ಐ ಓಮನ ಎನ್ ಕೆ, ಪಿಡಿಒ ಮುತ್ತಪ್ಪ, ಕಾರ್ಯದರ್ಶಿ ಮೋನಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ನ ಕೊರೊನಾ ಕಾರ್ಯಪಡೆಯ ಸದಸ್ಯರು, ಗ್ರಾ.ಪಂ ಸದಸ್ಯರು ಇದ್ದರು. ಸಭೆಯಲ್ಲಿ ಕೆಲ ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಸುಬ್ರಹ್ಮಣ್ಯ ಗ್ರಾ.ಪಂ ವ್ಯಾಪ್ತಿಯಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಿ ನಿರ್ಣಯ ಕೈಗೊಳ್ಳಲಾಗಿದ್ದು ಹೊರ ಸಂಚಾರವನ್ನು ನಿರ್ಬಂಧಿಸಲಾಗಿದೆ. ಗ್ರಾ.ಪಂ ವ್ಯಾಪ್ತಿಯ ಎಲ್ಲಾ ಗ್ರಾಮಗಳ ಪ್ರವೇಶ ರಸ್ತೆಗಳ ಸೆಕ್ಯುರಿಟಿ ವ್ಯವಸ್ಥೆ ಮಾಡುವುದಾಗಿ ನಿರ್ಣಯಿಸಲಾಗಿದೆ. ಗ್ರಾ.ಪಂ ವ್ಯಾಪ್ತಿಯಲ್ಲಿ ತೀರಾ ಅಗತ್ಯ ಸೇವೆಗಳು ಬೇಕಾಗಿದ್ದಲ್ಲಿ ಆಯಾ ವಾರ್ಡಿನ ಗ್ರಾ.ಪಂ ಸದಸ್ಯರನ್ನು ಅಥವಾ ಗ್ರಾ.ಪಂ ನ್ನು ಸಂಪರ್ಕಿಸುವಂತೆ 9480862399, 9900369510 ಕೋರಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.