Breaking News

ಐವರ್ನಾಡಿನಲ್ಲಿ ಕೊರೊನಾ ಲಸಿಕಾ ಕಾರ್ಯಕ್ರಮ

Advt_Headding_Middle

 

ಒಟ್ಟು 202 ಮಂದಿಗೆ ಕೋವಿಡ್ ಲಸಿಕೆ

ಐವರ್ನಾಡು ಗ್ರಾಮ ಪಂಚಾಯತ್,ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರ,ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಜೂ.21 ರಂದು ಐವರ್ನಾಡು ಗ್ರಾಮ ವಿಕಾಸ ಸಭಾಭವನದಲ್ಲಿ ಕೊರೋನಾ ಲಸಿಕಾ ಶಿಬಿರ ನಡೆಯಿತು.

ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ 45 ವರ್ಷಕ್ಕಿಂತ ಮೇಲ್ಪಟ್ಟ 131 ಜನರಿಗೆ ಹಾಗೂ 18 -44 ವರ್ಷ ವಯಸ್ಸಿನ ಆದ್ಯತಾ ವಲಯದ 71 ಜನರಿಗೆ ಕೋರೋನಾ ಕೋವಿಡ್ ಲಸಿಕೆಯನ್ನು ನೀಡಲಾಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ, ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮ ಲೆಕ್ಕಾಧಿಕಾರಿ ಕಾರ್ತಿಕ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದು ಸಹಕರಿಸಿದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯು.ಡಿ.ಶೇಖರ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಆದ್ಯತೆಯ ಮೇಲೆ ವ್ಯಾಕ್ಸಿನೇಷನ್‌ ನೀಡಲು ಸಹಕರಿಸಿದರು.
ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಕಾರ್ಯಕರ್ತೆಯರು ವ್ಯಾಕ್ಸಿನೇಷನ್‌ ನೀಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.