Breaking News

ಎಣ್ಮೂರು : ಅಪ್ರಾಪ್ತ ಮಗಳ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ಆರೋಪಿ ತಂದೆಗೆ ಕಠಿಣ ಜೈಲು ಶಿಕ್ಷೆ ವಿಧಿಸಿದ ಪುತ್ತೂರು ಕೋರ್ಟ್

Advt_Headding_Middle

 

 

ತನ್ನ ಅಪ್ರಾಪ್ತ ಮಗಳ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಗೆ ಪುತ್ತೂರು ನ್ಯಾಯಾಲಯ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶಿದೆ.

೨೦೧೫ರ ಮೇ ೨೪ರಂದು ಸುಳ್ಯ ತಾಲೂಕಿನ ಎಣ್ಮೂರು ಎಂಬಲ್ಲಿ ಈ ಕೃತ್ಯ ನಡೆದಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಆರೋಪಿಯನ್ನು ಬಂಧಿಸಿದ್ದ ಪೊಲೀಸರು ವಿಚಾರಣೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಇದೀಗ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಜೂನ್ ೨೧ರಂದು ತೀರ್ಪು ಪ್ರಕಟಿಸಿದೆ.

ಮನೆಯಲ್ಲಿ ಮಲಗಿದ್ದ ತನ್ನ ಅಪ್ರಾಪ್ತೆ ಮಗಳ ಮೇಲೆ ಸ್ವತಃ ತಂದೆಯೇ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣ ಅಂದು ಬೆಚ್ಚಿ ಬೀಳಿಸಿತ್ತು. ಪ್ರಕರಣದ ವಾದ-ಪ್ರತಿವಾದ ಆಲಿಸಿದ ಪುತ್ತೂರು ಪೋಕ್ಸೋ ವಿಶೇಷ ನ್ಯಾಯಾಲಯ ಹಾಗೂ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರುಡಾಲ್ಫ್ ಪಿರೇರಾರವರು ಪ್ರಾಸಿಕ್ಯೂಶನ್ ಪರ ವಾದ ಮಂಡಿಸಿದ್ದ ಸರಕಾರಿ ಅಭಿಯೋಜಕರ ವಾದ ಪುರಸ್ಕರಿಸಿ ಆರೋಪಿಗೆ ಜೈಲು ಶಿಕ್ಷೆ ವಿಧಿಸಿದ್ದಾರೆ.

ಘಟನೆಯ ವಿವರ: ಸುಳ್ಯ ತಾಲೂಕಿನ ಎಣ್ಮೂರು ನಿವಾಸಿಯಾಗಿರುವ ಆರೋಪಿ ತನ್ನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ. ಈ ವಿಚಾರ ಬಾಲಕಿಯ ತಾಯಿಗೆ ತಿಳಿದು ಅವರು ಆರೋಪಿಯನ್ನು ಉದ್ದೇಶಿಸಿ ಗೊತ್ತಾಂಡ್ ಎಂದು ಹೇಳಿದ್ದಕ್ಕೆ ಆತ ಆಕೆಗೆ ಅವಾಚ್ಯ ಶಬ್ದಗಳಿಂದ ಬೈದು ಕೈಯಿಂದ ಹೊಡೆದು ಹಲ್ಲೆ ನಡೆಸಿದ್ದ ಎಂದು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿತ್ತು. ಪೊಲೀಸರು ಆರೋಪಿಯ ವಿರುದ್ಧ ಭಾ.ದಂ.ಸಂ. ಕಲಂ ೩೭೬, ೫೦೪, ೩೨೩ ಮತ್ತು ಪೋಕ್ಸೋ ಕಾಯ್ದೆ ಕಲಂ ೪ರಡಿ ಪ್ರಥಮ ವರ್ತಮಾನ ದಾಖಲೆ ದಾಖಲಿಸಿದ್ದರು. ನಂತರ ತನಿಖೆ ನಡೆಸಿದ್ದ ಅಂದಿನ ಸುಳ್ಯ ಪೊಲೀಸ್ ವೃತ್ತ ನಿರೀಕ್ಷಕ ಬಿ.ಎಸ್.ಸತೀಶ್‌ರವರು ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಪುತ್ತೂರಿನ ಪೊಕ್ಸೋ ವಿಶೇಷ ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಆರೋಪಿಯು ಬಾಲಕಿಯ ತಂದೆಯಾದ ಕಾರಣ ನ್ಯಾಯಾಲಯವು ವಿಚಾರಣಾ ಕಾಲಕ್ಕೆ ಪೋಕ್ಸೋ ಕಲಂ ೬ನ್ನು ಹೆಚ್ಚುವರಿಯಾಗಿ ಸೇರಿಸಿತ್ತು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ಬಾಲಕಿಯನ್ನು ಅತ್ಯಾಚಾರವೆಸಗಲು ಪ್ರಯತ್ನಿಸಿದ್ದಾಗಿ ಭಾ.ದಂ.ಸಂ. ೩೭೬/೫೧೧, ೫೦೪, ೩೨೩ ಮತ್ತು ಪೋಕ್ಸೋ ಕಾಯ್ದೆ ಕಲಂ ೬ ಜೊತೆಗೆ ೧೮ರಡಿ ಆರೋಪಿ ತಪ್ಪಿತಸ್ಥನೆಂದು ತೀರ್ಪು ನೀಡಿದೆ. ಈ ಪ್ರಕರಣಕ್ಕೆದಲ್ಲಿ ಆರೋಪಿಗೆ ೫ ವರ್ಷ ಕಠಿಣ ಕಾರಾಗೃಹ ವಾಸದ ಶಿಕ್ಷೆ ಮತ್ತು ರೂ. ೨೫ ಸಾವಿರ ದಂಡ ತೆರಲು ಆದೇಶಿಸಿದೆ. ದಂಡ ತೆರಲು ತಪ್ಪಿದ್ದಲ್ಲಿ ೧ ವರ್ಷ ಸಾದಾ ಸ್ವರೂಪದ ಶಿಕ್ಷೆಯನ್ನು ಅನುಭವಿಸುವಂತೆ ಕೋರ್ಟ್ ತಿಳಿಸಿದೆ. ಆರೋಪಿ ತನ್ನ ಪತ್ನಿ `ಗೊತ್ತಾಂಡ್’ ಎಂದು ಹೇಳಿದಾಗ ಆಕೆಯನ್ನು ಅವಾಚ್ಯ ಶಬ್ದಗಳಿಂದ ಬೈದ ಪ್ರಕರಣಕ್ಕೆ ಸಂಬಂಧಿಸಿ ೪ ತಿಂಗಳ ಸಾದಾ ಸ್ವರೂಪದ ಶಿಕ್ಷೆ ಮತ್ತು ರೂ. ೧ ಸಾವಿರ ದಂಡ ವಿಧಿಸಿರುವ ನ್ಯಾಯಾಲಯ ದಂಡ ತೆರಲು ತಪ್ಪಿದ್ದಲ್ಲಿ ಪುನಃ ೧ ತಿಂಗಳ ಸಾದಾ ಸ್ವರೂಪದ ಶಿಕ್ಷೆ ಅನುಭವಿಸಬೇಕು ಎಂದು ತನ್ನ ತೀರ್ಪಿನಲ್ಲಿ ತಿಳಿಸಿದೆ. ಆರೋಪಿಯು ಬಾಲಕಿಯ ತಾಯಿಗೆ ಹಲ್ಲೆ ಮಾಡಿದ ಬಗ್ಗೆ ೪ ತಿಂಗಳ ಸಾದಾ ಸ್ವರೂಪದ ಶಿಕ್ಷೆ ಮತ್ತು ರೂ. ೫೦೦ ದಂಡ, ದಂಡ ತೆರಲು ತಪ್ಪಿದ್ದಲ್ಲಿ ೧೫ ದಿವಸಗಳ ಸಾದಾ ಸ್ವರೂಪದ ಶಿಕ್ಷೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ನ್ಯಾಯಾಧೀಶರು ತಿಳಿಸಿದ್ದಾರೆ.

ಬಾಲಕಿಗೆ ಪರಿಹಾರ: ದಂಡದ ಮೊತ್ತದಲ್ಲಿ ರೂ. ೨೫ ಸಾವಿರವನ್ನು ಬಾಲಕಿಗೆ ನೀಡಲು ನ್ಯಾಯಾಲಯ ಆದೇಶಿಸಿದೆ. ನ್ಯಾಯಾಲಯ ಬಾಲಕಿಗೆ ಕಲಂ ೩೫೭(ಎ) ಹಾಗೂ ಪೋಕ್ಸೋ ಕಾಯ್ದೆ ಕಲಂ ೩೩(೮) ಜೊತೆಗೆ ನಿಯಮ ೭ರಡಿ ರೂ.೧ ಲಕ್ಷ ಪರಿಹಾರ ನೀಡಲು ದ.ಕ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶ ನೀಡಿದೆ. ಪ್ರಾಸಿಕ್ಯೂಶನ್ ಪರವಾಗಿ ಪೋಕ್ಸೋ ವಿಶೇಷ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕ ಕುದ್ರಿಯ ಪುಷ್ಪರಾಜ ಅಡ್ಯಂತಾಯರವರು ವಾದಿಸಿದ್ದರು.

14 ಸಾಕ್ಷಿ 19 ದಾಖಲೆ
ಆರೋಪಿಯ ವಿರುದ್ಧ ಪ್ರಕರಣ ದಾಖಲಾದ ಬಳಿಕ ಆತನನ್ನು ಪೊಲೀಸರು ಬಂಧಿಸಿದ್ದರು. ನಂತರ ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಬಳಿಕ ಆತನಿಗೆ ಶರತ್ತು ಬದ್ಧ ಜಾಮೀನು ಮಂಜೂರುಗೊಂಡಿದ್ದರೂ ನ್ಯಾಯಾಲಯದ ಶರತ್ತನ್ನು ಉಲ್ಲಂಸಿದ ಹಿನ್ನೆಲೆಯಲ್ಲಿ ಆರೋಪಿಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ಆರೋಪಿಯ ಕೃತ್ಯವನ್ನು ಸಾಬೀತು ಪಡಿಸಲು ೧೪ ಸಾಕ್ಷಿ ಮತ್ತು ೧೯ ದಾಖಲೆಗಳನ್ನು ಹಾಜರು ಪಡಿಸಲಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.