ಕೋಲ್ಚಾರು ಶಾಲೆಯ ವಠಾರದಲ್ಲಿ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ

Advt_Headding_Middle

 

ಆಲೆಟ್ಟಿ ಗ್ರಾಮ ಪಂಚಾಯತ್ ವತಿಯಿಂದ ಕೋಲ್ಚಾರು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೋವಿಡ್ ಮೊದಲ ಡೋಸ್ ಲಸಿಕೆ ಹಾಕುವ ಕಾರ್ಯಕ್ರಮ ಜೂ.21 ರಂದು ನಡೆಯಿತು.

45 ವರ್ಷ ಮೇಲ್ಪಟ್ಟವರಿಗೆ ಹಾಗೂ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಹಾಕಲಾಯಿತು. ಪಂಚಾಯತ್ ನಿಂದ ಅನೆಕ್ಷರ್ ಫಾರಂ ನ್ನು ಆಧಾರ್ ಕಾರ್ಡ್ ತಂದಿರುವವರಿಗೆ ಸ್ಥಳದಲ್ಲೇ ನೋಂದಾಯಿಸಿ ಕೊಡುವ ವ್ಯವಸ್ಥೆ ಮಾಡಲಾಗಿತ್ತು. ಆರೋಗ್ಯಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲೆಯ ಶಿಕ್ಷಕರು ಲಸಿಕೆ ಹಾಕುವ ವ್ಯವಸ್ಥೆಗೆ ಸಂಪೂರ್ಣ ಸಹಕಾರ ನೀಡಿದರು. ಸುಮಾರು 80+50 ರಷ್ಟು ಲಸಿಕೆ ಪೂರೈಕೆ ಇರುವುದಾಗಿ ಆರೋಗ್ಯಇಲಾಖೆಯವರು ಮಾಹಿತಿ ನೀಡಿದರು.
ಈ ಸಂದರ್ಭ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ವಾರ್ಡಿನ ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಸ್ಥಳದಲ್ಲಿದ್ದು ಕ್ರಮ ಪ್ರಕಾರ ಲಸಿಕೆ ಹಾಕುವ ವ್ಯವಸ್ಥೆಗೆ ಸಹಕರಿಸಿದರು. ಮೊದಲು ನೋಂದಾಯಿಸಿದ ಪ್ರಕಾರ ಟೋಕನ್ ನೀಡಿ ಕೋವಿಡ್ ನಿಯಮದಂತೆ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿತ್ತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.