Breaking News

ಸಚಿವ ಅಂಗಾರರಿಂದ ನಾಳೆ ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಶಂಕುಸ್ಥಾಪನೆ

Advt_Headding_Middle

 

ಸುಳ್ಯ ಪ್ರೆಸ್ ಕ್ಲಬ್ ಕಟ್ಟಡಕ್ಕೆ ನಾಳೆ ಜು.3ರಂದು ಪೂ.9.30ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಸುಳ್ಯದ ಅಂಬಟೆಡ್ಕದಲ್ಲಿರುವ ಕನ್ನಡ ಭವನದ ಸಮೀಪ ಸುಳ್ಯ ತಾಲೂಕು ಪಂಚಾಯತ್ ಪ್ರೆಸ್ ಕ್ಲಬ್‌ಗೆ ನೀಡಿರುವ ಸ್ಥಳದಲ್ಲಿ ಪ್ರೆಸ್ ಕ್ಲಬ್ ಕಟ್ಟಡ ನಿರ್ಮಾಣವಾಗಲಿದ್ದು ಸರಕಾರದ ಅನುದಾನ ಮತ್ತು ದಾನಿಗಳ ನೆರವಿನಿಂದ ಎರಡು ಮಹಡಿಯ ಸುಸಜ್ಜಿತ ಪತ್ರಿಕಾ ಭವನ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಸುಳ್ಯ ಶಾಸಕರಾದ ಬಂದರು, ಮೀನುಗಾರಿಕೆ ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಶಿಲಾನ್ಯಾಸ ನೆರವೇರಿಸಲಿದ್ದಾರೆ.

 

ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಲಿದ್ದಾರೆ. ಪತ್ರಿಕಾಭವನಕ್ಕೆ ನಿವೇಶನ ಒದಗಿಸಲು ಸಹಕಾರ ನೀಡಿದ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ತಾ.ಪಂ. ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹರೀಶ್ ಕಂಜಿಪಿಲಿ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಅವರನ್ನು ಗೌರವಿಸಲಾಗುವುದು. ಮುಖ್ಯ ಅತಿಥಿಗಳಾಗಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ತಹಶೀಲ್ದಾರ್ ಕು.ಅನಿತಾಲಕ್ಷ್ಮಿ, ಸುದ್ದಿ ಬಿಡುಗಡೆ ಸಮೂಹ ಮಾಧ್ಯಮ ಸಂಸ್ಥೆಯ ಸಂಪಾದಕ ಡಾ.ಯು.ಪಿ.ಶಿವಾನಂದ, ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಅಧ್ಯಕ್ಷ ಡಾ.ಕೆ.ವಿ.ಚಿದಾನಂದ, ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ., ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಸುಳ್ಯ ತಾಲೂಕು ಅಧ್ಯಕ್ಷ ಉಮೇಶ್ ಮಣಿಕ್ಕಾರ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೃಷ್ಣ ಬೆಟ್ಟ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಕೆಪಿಸಿಸಿ ಸಂಯೋಜಕ ನಂದಕುಮಾರ್ ಮಡಿಕೇರಿ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಕಾರ್ಮಿಕ ಮುಖಂಡ ಕೆ.ಪಿ.ಜಾನಿ ಕಲ್ಲುಗುಂಡಿ, ಕೆ.ಎಂ.ಮುಸ್ತಫ, ನಾರಾಯಣ ಕೇಕಡ್ಕ, ದಿನೇಶ್ ಮಡಪ್ಪಾಡಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರೆಸ್ ಕ್ಲಬ್ ಪ್ರಕಟಣೆ ತಿಳಿಸಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.