ಸುಳ್ಯದಲ್ಲಿ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಶಿಲಾನ್ಯಾಸ

Advt_Headding_Middle

 

ಸಚಿವ ಎಸ್.ಅಂಗಾರರಿಂದ ಚಾಲನೆ – ಹಲವು ಗಣ್ಯರು ಭಾಗಿ

ಸುಳ್ಯ ತಾಲೂಕು ಪಂಚಾಯತ್ ವತಿಯಿಂದ ಕೊಡಲ್ಪಟ್ಟ ನಿವೇಶನದಲ್ಲಿ ಪ್ರೆಸ್ ಕ್ಲಬ್ ಕಟ್ಟಡಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಇಂದು ನಡೆಯಿತು.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಗುದ್ದಲಿಪೂಜೆ ನೆರವೇರಿಸಿದರು. ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಬಂಟ್ವಾಳ್ ಅಧ್ಯಕ್ಷತೆ ವಹಿಸಿದ್ದರು.
ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ಪ್ರಧಾನ ಕಾರ್ಯದರ್ಶಿ ಡಾ.ರೇಣುಕಾ ಪ್ರಸಾದ್ ಕೆ.ವಿ, ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಶ್ರೀನಿವಾಸ ಇಂದಾಜೆ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಬಿ.ಸದಾಶಿವ, ಗುತ್ತಿಗೆದಾರ ನಾರಾಯಣ ಕೇಕಡ್ಕ, ನ್ಯಾಯವಾದಿ ದಿನೇಶ್ ಮಡಪ್ಪಾಡಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ಪಿ. ಜಾನಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಕೃಷ್ಣ ಬೆಟ್ಟ, ಜರ್ನಲಿಸ್ಟ್ ಯೂನಿಯನ್ ತಾಲೂಕು ಅಧ್ಯಕ್ಷ ಉಮೇಶ್ ಮಣಿಕ್ಕಾರ, ನಾಗರಾಜ ಮೇಸ್ತ್ರಿ, ನ.ಪಂ. ಮಾಜಿ ಸದಸ್ಯ ಕೆ.ಎಂ. ಮುಸ್ತಫ ವೇದಿಕೆಯಲ್ಲಿದ್ದರು.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಸ್ನೇಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ, ರಂಗಕರ್ಮಿ ಜೀವನ್ ರಾಂ ಸುಳ್ಯ, ಉಜ್ವಲ್ ಯು.ಜೆ., ಬೂಡು ರಾಧಾಕೃಷ್ಣ ರೈ, ಶಂಕರ ಪೆರಾಜೆ, ಹರೀಶ್ ರಾವ್, ಕೇಶವ ಸಿ.ಎ., ವೆಂಕಟ್ರಮಣ ಮುಳ್ಯ, ಆನಂದ ರಾವ್ ಕಾಂತಮಂಗಲ, ಸಚಿನ್ ರಾಜ್ ಶೆಟ್ಟಿ ಪೆರುವಾಜೆ ಮೊದಲಾದವರಿದ್ದರು. ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.