ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಕಟ್ಟಡ ಮತ್ತು ಇತರೇ ಕಾರ್ಮಿಕರಿಗೆ ಫುಡ್ ಕಿಟ್

Advt_Headding_Middle

 

ಸುಳ್ಯದಲ್ಲಿ ಸಚಿವ ಅಂಗಾರರಿಂದ ಕಾರ್ಮಿಕರಿಗೆ ವಿತರಣೆ

ಕೊರೊನಾ ಸಂಕಷ್ಟದ ಈ ಸಂದರ್ಭದಲ್ಲಿ ಸರಕಾರ ಕಾರ್ಮಿಕ ಇಲಾಖೆಯ ಮೂಲಕ ಕಟ್ಟಡ ಹಾಗೂ ಇತರೇ ನಿರ್ಮಾಣ ಕಾರ್ಮಿಕರಿಗೆ ಸಚಿವರ ವಾರ್ ರೂಂ ಮುಖಾಂತರ ಆಹಾರ ಕಿಟ್ ವಿತರಣೆ ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ನಡೆಯಿತು.

ಮೀನುಗಾರಿಕೆ ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ ಫುಡ್ ಕಿಟ್ ವಿತರಣೆಗೆ ಚಾಲನೆ ನೀಡಿದರು.

ಸುಳ್ಯ ಎ.ಪಿ.ಎಂ.ಸಿ. ಅಧ್ಯಕ್ಷ ವಿನಯ ಮುಳುಗಾಡು, ಉಪಾಧ್ಯಕ್ಷ ನವೀನ್ ಸಾರಕೆರೆ, ನ.ಪಂ. ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ,ಜಿ.ಪಂ. ಮಾಜಿ ಸದಸ್ಯ ಹರೀಶ್ ಕಂಜಿಪಿಲಿ, ತಾ.ಪಂ. ಮಾಜಿ ಅಧ್ಯಕ್ಷ ಚನಿಯ ಕಲ್ತಡ್ಕ , ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಮೊದಲಾದವರಿದ್ದರು.

ಇಲಾಖೆಯ ಅಧಿಕಾರಿ ಗಣಪತಿ ಹೆಗ್ಡೆ ಪ್ರಸ್ತಾವಿಕ ಮಾತನಾಡಿದರು. ಮಹೇಶ್ ರೈ‌ ಮೇನಾಲ ಕಾರ್ಯಕ್ರಮ ನಿರೂಪಿಸಿದರು. ಸುನಿಲ್ ಕೇರ್ಪಳ ಫಲಾನುಭವಿಗಳ ಪಟ್ಟಿ ವಾಚಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.