ಕೇಂದ್ರ ಸಚಿವ ಸ್ಥಾನಕ್ಕೆ‌‌ ಡಿ.ವಿ.ಎಸ್.ರಾಜೀನಾಮೆ

Advt_Headding_Middle

ಕೇಂದ್ರ ಸರಕಾರದ ಸಚಿವ ಸ್ಥಾನಕ್ಕೆ ಡಿ.ವಿ.ಸದಾನಂದ ಗೌಡ ರಾಜೀನಾಮೆ‌ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ‌ ನೇತೃತ್ವದ ಸಚಿವ ಸಂಪುಟ ಪುನರ್ ರಚನೆ ಹಿನ್ನೆಲೆಯಲ್ಲಿ ಕೆಲವರಿಗೆ ಸಚಿವ ಸ್ಥಾನದ ಭಡ್ತಿ ದೊರೆತಿದೆ. ಇನ್ನು‌ ಕೆಲವು ಹೊಸಮುಖಗಳಿಗೆ ಮಣೆ ಹಾಕಲಾಗಿದೆ. ಸಚಿವ ಸಂಪುಟದಿಂದ ಕೈ ಬಿಡುವವರ ಪೈಕಿ ಸದಾನಂದ ಗೌಡರವರು‌ ಸಚಿವ ಸಂಪುಟ ವಿಸ್ತರಣೆಯ ಅಧಿಕೃತ ಘೋಷಣೆಯ ಮೊದಲೇ ತಮ್ಮ‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.


ಮಂಡೆಕೋಲು ಗ್ರಾಮದ ದೇವರಗುಂಡದವರಾದ ಸದಾನಂದ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿ, ವಿರೋಧ ಪಕ್ಷದ ಉಪನಾಯಕರಾಗಿ, ಮಂಗಳೂರು‌ ಲೋಕಸಭಾ ಕ್ಷೇತ್ರದ ಸದಸ್ಯರಾಗಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯರಾಗಿ, ರಾಷ್ಟ್ರೀಯ ಬಿಜೆಪಿ ಪ್ರಧಾನ‌ ಕಾರ್ಯದರ್ಶಿಯಾಗಿ, ಬಿಜೆಪಿ ರಾಜ್ಯಾಧ್ಯಕ್ಷರಾಗಿ, ವಿಧಾನ ಪರಿಷತ್ ಸದಸ್ಯರಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ, ವಿವಿಧ ರಾಜ್ಯಗಳ‌ ಬಿಜೆಪಿ‌ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿದ್ದರು.‌ ಪ್ರಸ್ತುತ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಎರಡನೇ ಬಾರಿಗೆ ಸದಸ್ಯರಾಗಿರುವ ಸದಾನಂದ ಗೌಡರವರು ಕೇಂದ್ರ ಸರಕಾರದಲ್ಲಿ‌ ರೈಲ್ವೇ, ಕಾನೂನು, ಅಂಕಿ ಅಂಶ ಅನುಷ್ಠಾನ‌ ಖಾತೆ‌ ನಿಭಾಯಿಸಿದ್ದು ಪ್ರಸ್ತುತ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ನಿಭಾಯಿಸುತ್ತಿದ್ದರು. ಸಚಿವ ಸಂಪುಟ ಪುನರ್ ರಚನೆ ಹಿನ್ನೆಲೆಯಲ್ಲಿ ಅವರಿಂದ ರಾಜೀನಾಮೆ‌ ಪಡೆಯಲಾಗಿದೆ. ಸದಾನಂದ ಗೌಡರವರಿಗೆ ಪಕ್ಷದ ಉನ್ನತ ಹುದ್ದೆ ದೊರೆಯಲಿದೆ ಎಂದು ಹೇಳಲಾಗುತ್ತಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.