ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸಂಸ್ಥಾಪಕರ ಸ್ಮೃತಿ ದಿನಾಚರಣೆ

Advt_Headding_Middle

 

ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯ ಸಂಸ್ಥಾಪಕರಾದ ನೆಟ್ಟಾರು ವೆಂಕಟಸುಬ್ಬರಾವ್ ಇವರ ಸ್ಮೃತಿ ದಿನಾಚರಣೆಯನ್ನು ಕೋವಿಡ್ ನಿಯಮಗಳನ್ನು ಅನುಸರಿಸಿ ಸರಳವಾಗಿ ಜು. 6ರಂದು ಆಚರಿಸಲಾಯಿತು.

ಆಡಳಿತ ಮಂಡಳಿಯ ಅಧ್ಯಕ್ಷರಾದ ನೆಟ್ಟಾರು ವೆಂಕಟ್ರಮಣ ಭಟ್ ಮಾತನಾಡುತ್ತಾ ಗ್ರಾಮೀಣಪ್ರದೇಶದಲ್ಲಿ ಐದು ದಶಕಗಳ ಹಿಂದೆ ಶಾಲೆಯನ್ನು ಆರಂಭಿಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಲಭಿಸುವಂತೆ ಮಾಡಿದ ಮಹಾಚೇತನ ವೆಂಕಟಸುಬ್ಬರಾವ್ ಪ್ರಾತಃ ಸ್ಮರಣೀಯರಾಗಿದ್ದಾರೆ ಎಂದರು. ಶಾಲಾ ಸಂಚಾಲಕರಾದ ಎನ್ ವಿಷ್ಣುಭಟ್, ಕೋಶಾಧಿಕಾರಿಯಾದ ಸತೀಶ ನೆಟ್ಟಾರು, ಪ್ರೌಢಶಾಲಾ ಸಿಬ್ಬಂದಿವರ್ಗ, ವಿದ್ಯಾಬೋಧಿನೀ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು, ಅಂಗನವಾಡಿ ಶಿಕ್ಷಕಿ ಮತ್ತಿತರರು ಉಪಸ್ಥಿತರಾಗಿ ಸಂಸ್ಥಾಪಕರ ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಿದರು. ಮುಖ್ಯೋಪಾಧ್ಯಾಯರಾದ ಯಶೋಧರ ನಾರಾಲು ಸ್ವಾಗತಿಸಿದರು. ಸಂಸ್ಕೃತ ಶಿಕ್ಷಕ ವೆಂಕಟೇಶ ಕುಮಾರ್ ಕಾರ್ಯಕ್ರಮ ನಿರ್ವಹಿಸಿ ಧನ್ಯವಾದಗಳನ್ನಿತ್ತರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.