ಸಚಿವ  ಅಂಗಾರರಿಂದ ಸುಳ್ಯದಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆಯಡಿ ಫಲಾನುಭವಿಗಳಿಗೆ ಚೆಕ್ ವಿತರಣೆ

Advt_Headding_Middle

 

 

ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆ ಮತ್ತು ರಾಷ್ಟೀಯ ಕುಟುಂಬ ನೆರವು ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಚೆಕ್ ವಿತರಣೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜು.8 ರಂದು ನಡೆಯಿತು.

ಸಚಿವ ಎಸ್.ಅಂಗಾರ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿ, ಕೋವಿಡ್ ಕಾಲದಲ್ಲಿ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಕೊರೋನಾ ನಿಯಮಗಳನ್ನು ಪಾಲನೆ ಮಾಡುವ ಮೂಲಕ ಕೋವಿಡ್ ಮುಕ್ತ ತಾಲೂಕುವನ್ನಾಗಿ ಮಾಡಬೇಕು. ಗ್ರಾಮ ಪಂಚಾಯಿತಿಗಳ ಮೂಲಕ ಲಸಿಕೆ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಹರೀಶ್ ಕಂಜಿಪಿಲಿ,ವೆಂಕಟ್ ವಳಲಬೆ, ತಹಸೀಲ್ದಾರ್ ಕು.ಅನಿತಾಲಕ್ಷ್ಮಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎನ್. ಭವಾನಿಶಂಕರ್, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಪ್ರಾಕೃತಿಕ ವಿಕೋಪ ಪರಿಹಾರ ಯೋಜನೆಯಡಿ ೨೬ ಫಲಾನುಭವಿಗಳಿಗೆ ಮತ್ತು ರಾಷ್ಟೀಯ ಕುಟುಂಬ ಯೋಜನೆಯಡಿ ೩೫ ಫಲಾನುಭವಿಗಳಿಗೆ ಹಾಗೂ ಅಂತ್ಯ ಸಂಸ್ಕಾರ ಸಹಾಯಧನವನ್ನು ೩ ಮಂದಿ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.