Breaking News

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು ಸಹಾಯಕ ಪ್ರಾಧ್ಯಾಪಕರ ನೇಮಕ

Advt_Headding_Middle

ನೆಹರು ಮೆಮೋರಿಯಲ್ ಕಾಲೇಜು ಸುಳ್ಯ, ಇದರ ರಾಜ್ಯಶಾಸ್ತ್ರ, ಅರ್ಥಶಾಸ್ತ್ರ ಮತ್ತು ಗ್ರಂಥಾಲಯ ವಿಭಾಗದಲ್ಲಿ ಅನುದಾನಿತ ಹುದ್ದೆಯಲ್ಲಿದ್ದವರು ನಿವೃತ್ತರಾಗಿ ಖಾಲಿ ಇದ್ದ ಹುದ್ದೆಗಳಿಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ದೊರೆತ ಆದೇಶ ಪ್ರಕಾರ ಸಹಾಯಕ ಪ್ರಾಧ್ಯಾಪಕರನ್ನು ನೇಮಿಸಿಕೊಳ್ಳಲಾಯಿತು. ಸುಳ್ಯ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ ನ ಅಧ್ಯಕ್ಷ ಡಾ.ಕೆ.ವಿ ಚಿದಾನಂದರು ನೇಮಕಾತಿ ಆದೇಶವನ್ನು ನೀಡುವುದರ ಮೂಲಕ ಸಹಾಯಕ ಅಧ್ಯಾಪಕರು ಕರ್ತವ್ಯಕ್ಕೆ ಹಾಜರಾಗುವುದಕ್ಕೆ ಅನುಮತಿಸಲಾಯಿತು.


ರಾಜ್ಯಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿಯಾಗಿ ಶ್ರೀಮತಿ ಮಮತಾ ಪುರುಷೋತ್ತಮ, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ವಿಜಯಲಕ್ಷ್ಮಿ ಮತ್ತು ಮುಖ್ಯ ಗ್ರಂಥಪಾಲಕರಾಗಿ ಉಮೇಶ್‌ರವರು ಕರ್ತವ್ಯಕ್ಕೆ ಹಾಜರಾದರು.
ಈ ಸಂದರ್ಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‌ನ ನಿರ್ದೇಶಕರಾದ ಅರ್ಕೆಟೆಕ್ ಅಕ್ಷಯ್ ಕೆ.ಸಿ, ಕಾಲೇಜಿನ ಪ್ರಾಚಾರ್ಯ ಡಾ. ಪೂವಪ್ಪ ಕಣಿಯೂರು, ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಎಂ. ಬಾಲಚಂದ್ರ ಗೌಡ, ಕಾಲೇಜಿನ ಹಿರಿಯ ಉಪನ್ಯಾಸಕರುಗಳಾದ ರುದ್ರಕುಮಾರ್ ಎಂ.ಎಂ., ಶ್ರೀಮತಿ ರತ್ನಾವತಿ ಡಿ, ತಿಪ್ಪೇಸ್ವಾಮಿ ಮತ್ತು ಕಛೇರಿ ಅಧೀಕ್ಷಕಿ ನಿವೇದಿತಾ ಎಂ. ಮತ್ತು ಅಧ್ಯಾಪಕ ವೃಂದ ಭಾಗಿಯಾಗಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.