ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರುದ್ಧ ಸುಳ್ಯ ತಾಲೂಕಿನಾದ್ಯಂತ ರಿಕ್ಷಾ ಚಾಲಕರ ಸಂಘ ಪ್ರತಿಭಟನೆ

Advt_Headding_Middle

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ವಿರುದ್ಧ ಬಿ.ಎಂ.ಎಸ್ ಸಂಯೋಜಿತ ಸುಳ್ಯ ತಾಲೂಕು ಅಟೋ ರಿಕ್ಷಾ ಚಾಲಕರ ಸಂಘ ವತಿಯಿಂದ ಇಂದು ತಾಲೂಕಿನಾದ್ಯಂತ ಪ್ರತಿಭಟನೆ ನಡೆಸಿದರು.


ಭಾರತೀಯ ಮಜ್ದೂರ್ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಹಾಗೂ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷ ರಾಧಾಕೃಷ್ಣ ಬೈತಡ್ಕ ರವರ ನೇತೃತ್ವದಲ್ಲಿ ಸುಳ್ಯ ಖಾಸಗಿ ಬಸ್ಸು ನಿಲ್ದಾಣದ ಬಿಎಂಎಸ್ ಆಟೋ ನಿಲ್ದಾಣದಲ್ಲಿ ಪ್ರತಿಭಟನೆಯನ್ನು ನಡೆಸಿ ಮಾತನಾಡಿದರು. ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


ಪೆಟ್ರೋಲ್ ಬೆಲೆಯು ಲೀಟರಿಗೆ ರೂ.104 ಮತ್ತು ಡೀಸೆಲ್ ರೂ.94 ಆಗಿದೆ. ಇದರಿಂದ ಚಾಲಕರ ಜೀವನ ಕಷ್ಟಕರವಾಗಿದೆ. ಇಂಧನ ಬೆಲೆ ಏರಿಕೆಯಾದರೂ ಪ್ರಯಾಣದರ ಪರಿಷ್ಕರಣೆ ಆಗದಿರುವುದರಿಂದ ಜೀವನದ ದೈನಂದಿನ ಬದುಕು ಅಲ್ಲೋಲಕಲ್ಲೋಲವಾಗಿದೆ. ಈ ಕುರಿತು ಸರಕಾರಕ್ಕೆ ಮನವಿ ಸಲ್ಲಿಸಿ ಇಂಧನವನ್ನು ಸಬ್ಸಿಡಿ ದರದಲ್ಲಿ ಒದಗಿಸಬೇಕೆಂದು ಮನವಿ ಮೂಲಕ ಸುಳ್ಯ ತಾಲೂಕು ಕಚೇರಿಗೆ ತೆರಳಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ನೀಡಿದರು.


ಈ ಪ್ರತಿಭಟನೆಯು ಏಕಕಾಲದಲ್ಲಿ ಸುಳ್ಯ ತಾಲೂಕಿನಾದ್ಯಂತ ಸುಳ್ಯ ಹಳೇ ಬಸ್ ನಿಲ್ದಾಣ, ಗಾಂಧಿನಗರ, ಕುರುಂಜಿಭಾಗ್, ಶ್ರೀರಾಮಪೇಟೆ, ಸುಳ್ಯ ಸರ್ಕಾರಿ ಆಸ್ಪತ್ರೆಯ ಬಳಿ, ಪೈಚಾರು, ಜಾಲ್ಸೂರು, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು, ದೊಡ್ಡತೋಟ, ಉಬರಡ್ಕ, ಐವರ್ನಾಡು, ಮರ್ಕಂಜ ಕಲ್ಲುಗುಂಡಿ, ಮುಂತಾದ ನಿಲ್ದಾಣಗಳಲ್ಲಿ ಬೆಳಗ್ಗೆ 11 ಗಂಟೆಯಿಂದ ಪ್ರತಿಬಟನೆಗಳು ಆಯಾ ಪರಿಸರದ ಆಟೋಚಾಲಕರು ತಮ್ಮ-ತಮ್ಮ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆಯ ಬ್ಯಾನರನ್ನು ಅಳವಡಿಸಿ ತಮ್ಮ ಬೇಡಿಕೆಗಳನ್ನು ಮುಂದಿಟ್ಟರು.


ಸಂಘದ ಕಾನೂನು ಸಲಹೆಗಾರ ಭಾಸ್ಕರ ರಾವ್, ಪ್ರ.ಕಾರ್ಯದರ್ಶಿ ಚಂದ್ರಶೇಖರ್ ಮರ್ಕಂಜ, ಮಾಜಿ ಅಧ್ಯಕ್ಷ ವಿಜಯ ಕುಮಾರ್ ಉಬರಡ್ಕ, ಸಮಿತಿಯ ಪದಾಧಿಕಾರಿಗಳಾದ ಮನೋಹರ ಚೊಕ್ಕಾಡಿ, ಹರೀಶ್ ನೆಕ್ರಾಜೆ ಮೊದಲಾದವರು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.