ಸುಬ್ರಹ್ಮಣ್ಯ: ಪ್ರಾ.ಆ.ಕೇಂದ್ರದಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಪ್ರೊಟೀನ್ ಪೌಡರ್ ವಿತರಣೆ

Advt_Headding_Middle


ದ.ಕ.ಜಿ.ಪಂ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಅಭಯ ಚಾರಿಟೇಬಲ್ ಟ್ರಸ್ಟ್ ರಿ, ದ.ಕ. ಜಿಲ್ಲೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಸುಬ್ರಹ್ಮಣ್ಯ ಇವುಗಳ ಸಂಯುಕ್ತ ಆಶ್ರಯದಲ್ಲಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಬ್ರಹ್ಮಣ್ಯ ವಲಯ ಅಂಗನವಾಡಿ ಮಕ್ಕಳ ಆರೋಗ್ಯ ತಪಾಸಣೆ ಮತ್ತು ಮಕ್ಕಳಿಗೆ ಪ್ರೋಟೀನ್ ಪೌಡರ್ ವಿತರಣಾ ಕಾರ್ಯಕ್ರಮ ಜು. 15ರಂದು ನಡೆಯಿತು.

ಅಭಯ ಚಾರಿಟಬಲ್ ಟ್ರಸ್ಟ್‌ನ ಅಧ್ಯಕ್ಷ, ಮಾಜಿ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಸುಳ್ಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ ಅಧ್ಯಕ್ಷತೆ ವಹಿಸಿದ್ದರು. ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ತ್ರಿಮೂರ್ತಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಸುಮಾರು 40 ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಮಕ್ಕಳಿಗೆ ಅಭಯ ಚಾರಿಟೇಬಲ್ ಸೊಸೈಟಿಯ ವತಿಯಿಂದ ಉಚಿತವಾಗಿ ಪೌಷ್ಟಿಕಾಂಶ ಪೌಡರ್ ಡಬ್ಬಗಳನ್ನು ವಿತರಿಸಲಾಯಿತು. ಅಂಗನವಾಡಿ ಮೇಲ್ವಿಚಾರಕಿ ವಿಜಯ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.