ಪೂದೆ: ಅವಳಿ ದೇವಸ್ಥಾನಗಳ ಜೀರ್ಣೋದ್ಧಾರ

Advt_Headding_Middle

ಸಚಿವ ಎಸ್.ಅಂಗಾರರ ಅಧ್ಯಕ್ಷತೆಯಲ್ಲಿ ಸಭೆ

ಮುರುಳ್ಯ ಶ್ರೀ ಗಣಪತಿ ಮಲ್ಲಿಕಾರ್ಜುನ ದೇವಸ್ಥಾನ ಮತ್ತು ಶ್ರೀ ವಿಷ್ಣುಮೂರ್ತಿ ದೇವಸ್ಥಾನಗಳು ಜೀರ್ಣೋದ್ಧಾರಗೊಳ್ಳುತ್ತಿದ್ದು, ಅದರ ಅಂಗವಾಗಿ ಜುಲೈ 18 ರಂದು ದೇವಳ ಅರ್ಚಕ ಸುಬ್ರಹ್ಮಣ್ಯ ಉಪಾಧ್ಯಾಯರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳೊಂದಿಗೆ ಬಲಿವಾಡು ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.


ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಸ್.ಅಂಗಾರರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶೀಘ್ರವಾಗಿ ಕೆಲಸ ಕಾರ್ಯಗಳ ವೇಗ ಹೆಚ್ಚಿಸುವುದು, ಜೀರ್ಣೋದ್ಧಾರ ಕಾರ್ಯಗಳಲ್ಲಿ ಎಲ್ಲರನ್ನೂ ಒಟ್ಟುಗೂಡಿಸಿ ಎಲ್ಲರೂ ಕೈಜೋಡಿಸುವಂತೆ ಹಾಗೂ ಮುಂದಿನ ವಾರದಲ್ಲಿ ಜೀರ್ಣೋದ್ಧಾರ ಸಮಿತಿ ರಚಿಸುವುದೆಂದು ಚರ್ಚಿಸಲಾಯಿತು. ನಾವು ಸಾಧ್ಯವಾದಷ್ಟು ಹಣ ಕ್ರೋಢಿಕರಿಸಬೇಕು. ಸುಬ್ರಹ್ಮಣ್ಯ ದೇವಸ್ಥಾನದಿಂದ ಬಂದ ಹಣ ಉಳಿದರೆ ಸಾಕಷ್ಟು ಕೆಲಸಗಳು ನಡೆಯುತ್ತವೆ. ಉಪ ಕಟ್ಟಡಗಳು ಆಗಬೇಕು. ಅದಕ್ಕೆ ಉಪಯೋಗಿಸಬಹುದೆಂದು ಸಚಿವರು ಅಭಿಪ್ರಾಯಪಟ್ಟರು.

ಈ ಸಂದರ್ಭ ವೇದಿಕೆಯಲ್ಲಿ ಸುಳ್ಯ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ , ಜಿ.ಪಂ. ಮಾಜಿ ಸದಸ್ಯೆ ಭಾಗೀರಥಿ ಮುರುಳ್ಯ, ಗ್ರಾ.ಪಂ. ಉಪಾಧ್ಯಕ್ಷೆ ವನಿತಾ ಬಾಮೂಲೆ, ಸಮಿತಿ ಅಧ್ಯಕ್ಷರುಗಳಾದ ಭುವನೇಶ್ವರ ಪೊದೆ, ಪದ್ಮನಾಭ ಪೂದೆ, ಮುರುಳ್ಯ ಎಣ್ಮೂರು ಸೊಸೈಟಿ ಅಧ್ಯಕ್ಷ ವಸಂತ ನಡುಬೈಲು, ಸಮಾಹಾದಿ ಶ್ರೀರಾಮಾಂಜನೇಯ ಭಜನಾ ಮಂದಿರದ ಅಧ್ಯಕ್ಷ ವಸಂತ ನಡುಬೈಲು ಸಮಿತಿ ಸದಸ್ಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.