ಅರಂತೋಡು ಸೊಸೈಟಿ ವತಿಯಿಂದ ಸಿರಿ ನೆಟ್‌ಕೆಫೆ ವೈಫೈ ಹಬ್ ಉದ್ಘಾಟನೆ

Advt_Headding_Middle

ಪಹಣಿಯಲ್ಲಿ ಬೆಳೆ ನೋಂದಣಿ ಕುರಿತು ಮಾಹಿತಿ ಕಾರ್ಯಾಗಾರ
ಅರಂತೋಡು – ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಶಾಲಾ , ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಮನೆಯಲ್ಲಿ ಕುಳಿತು ಕೆಲಸ ಮಾಡುವ ನೌಕರರಿಗೆ ನೆರವಾಗುವ ದೃಷ್ಟಿಯಿಂದ ಸ್ಪರ್ಧಾತ್ಮಕ ದರದಲ್ಲಿ ವೈಫೈ ಅಂತರ್ಜಾಲವನ್ನು ಒದಗಿಸುವ ನೂತನ ಕಾರ್ಯಕ್ರಮ ಸಿರಿ ನೆಟ್‌ಕೆಫೆ ವೈಫೈ ಹಬ್ ನ ಉದ್ಘಾಟನೆ ಮತ್ತು ಪಹಣಿಯಲ್ಲಿ ಬೆಳೆ ನೋಂದಣಿ ಕುರಿತು ಮಾಹಿತಿ ಕಾರ್ಯಾಗಾರ ಇಂದು ಜುಲೈ 22 ರಂದು ಅರಂತೋಡು ಸಹಕಾರಿ ಸಂಘದ ಸಿರಿಸೌಧದಲ್ಲಿ ನಡೆಯಿತು.
ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ ಉಬರಡ್ಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಅರಂತೋಡು-ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಅರಂತೋಡು ಗ್ರಾ.ಪಂ.ಅಧ್ಯಕ್ಷೆ ಹರಿಣಿ ದೇರಾಜೆ ,ಏಕಾನೆಟ್ ನ ಸಾಯಿರಂಜನ್, ಸದಾಶಿವ ಕಡೆಪಾಲ ಭಾಗವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ಅಧಿಕಾರಿ ಮೋಹನ್ ನಂಗಾರು ಉಪಸ್ಥಿತರಿದ್ದರು.

ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸದೇವರವರು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.