ಸುಳ್ಯ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ತಹಶೀಲ್ದಾರರಿಗೆ ಮನವಿ

Advt_Headding_Middle

 

 

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸುಳ್ಯ ವತಿಯಿಂದ ತಹಶೀಲ್ದಾರ್ ಅವರ ಮೂಲಕ ರಾಜ್ಯಸರ್ಕಾರಕ್ಕೆ ಹಾಸ್ಟೆಲ್ ಗಳನ್ನು ಪ್ರಾರಂಭಿಸುವ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸುವ ಕುರಿತಾಗಿ ಮನವಿಯನ್ನು ನೀಡಲಾಯಿತು. ಕೋವಿಡ್ ಎರಡನೆಯ ಅಲೆಯಿಂದಾಗಿ ರಾಜ್ಯದ ಎಲ್ಲಾ ಹಾಸ್ಟೆಲ್ ಗಳು ಸೇರಿದಂತೆ ಎಲ್ಲಾ ಕಾಲೇಜುಗಳು ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಬಂದ್ ಆಗಿದ್ದವು. ಪ್ರಸ್ತುತ ರಾಜ್ಯ ಸರಕಾರವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬರುವ ದಿನಗಳಲ್ಲಿ ರಾಜ್ಯದ ಸ್ನಾತಕ ಮತ್ತು ಸ್ನಾತಕೋತ್ತರ ತರಗತಿಗಳನ್ನು ಆರಂಭಿಸುವಂತೆ ನೀಡಿರುವುದನ್ನು ಅಭಾವಿಪ ಸ್ವಾಗತಿಸುತ್ತದೆ.ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ಗಳಿಗೆ ಅವಲಂಬಿತವಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು ಅಲ್ಪಸಂಖ್ಯಾತ ಇಲಾಖೆಯ ವ್ಯಾಪ್ತಿಯ ಬರುವ ಎಲ್ಲಾ ಹಾಸ್ಟೆಲ್ಗಳನ್ನು ತೆರೆಯಬೇಕು ಮತ್ತು ಉನ್ನತ ಶಿಕ್ಷಣ ಇಲಾಖೆಯು ಈ ಇಲಾಖೆಗಳೊಂದಿಗೆ ಸಮನ್ವಯದೊಂದಿಗೆ ಸಂಬಂಧಪಟ್ಟ ಎಲ್ಲ ಕ್ರಮಗಳನ್ನು ತೆಗೆದುಕೊಂಡು ಸ್ಯಾನಿಟೈಸ್ ಮಾಡಿಸಿ ಹಾಸ್ಟೆಲ್ಗಳನ್ನು ಪ್ರಾರಂಭಿಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ನಲ್ಲಿ ಇರಲು ಅವಕಾಶ ಮಾಡಿಕೊಡಬೇಕೆಂದು ಅಭಾವಿಪ ಆಗ್ರಹಿಸುತ್ತದೆ ಮತ್ತು ಕಾಲೇಜುಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ತಕ್ಷಣವೇ ಬಸ್ ಪಾಸ್ ಸೌಲಭ್ಯ ಮಾಡಿಕೊಡಬೇಕಾಗಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ . ಮನವಿ ನೀಡುವ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಹ ಕಾರ್ಯದರ್ಶಿ ರವೀಶ ಕೇವಳ ,ಅಧ್ಯಯನ ಪ್ರಮುಖ್ ಭುವನ್, ಸಮಾಜಿಕ ಜಾಲತಾಣ ಪ್ರಮುಖ್ ಅನಿಲ್ ಕಾರ್ಯಕರ್ತರಾದ ಗಗನ್, ವಿನ್ಯಾಸ್ ,ಜನಾರ್ದನ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.