ಎಲಿಮಲೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಎನ್ ಎಂ ಎಂ ಎಸ್ ಪರೀಕ್ಷೆಯಲ್ಲಿ   ತೇರ್ಗಡೆಗೊಂಡು ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Advt_Headding_Middle

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ (ಎಂ ಎಚ್ ಆರ್ ಡಿ) ನವದೆಹಲಿ ಇದರ ಆಶ್ರಯದಲ್ಲಿ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು ಇವರು ಎಂಟನೇ ತರಗತಿಯ ವಿದ್ಯಾರ್ಥಿಗಳಿಗೆ ನಡೆಸಿದ 2020-21 ನೇ ಸಾಲಿನ ರಾಜ್ಯಮಟ್ಟದ   ಎನ್. ಎಂ. ಎಂ. ಎಸ್. ಪರೀಕ್ಷೆಯಲ್ಲಿ ಎಲಿಮಲೆ ಸರಕಾರಿ ಪ್ರೌಢಶಾಲೆಯ  6 ವಿದ್ಯಾರ್ಥಿಗಳು ತೇರ್ಗಡೆಗೊಂಡು ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.

ಈ ವಿದ್ಯಾರ್ಥಿಗಳಿಗೆ ಮುಂದಿನ 4 ವರ್ಷಗಳಲ್ಲಿ ತಿಂಗಳಿಗೆ ತಲಾ 1 ಸಾವಿರದಂತೆ 48 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ಲಭಿಸಲಿದೆ. ವಿಧ್ಯಾರ್ಥಿಗಳಿಗೆ ಮುಖ್ಯ ಶಿಕ್ಷಕರಾದ ಚಂದ್ರಶೇಖರ ಪೇರಾಲು ರವರ ಮಾರ್ಗದರ್ಶನದಲ್ಲಿ ಶಿಕ್ಷಕರು ನಿಯಮಿತವಾಗಿ ತರಬೇತಿ ನೀಡಿದ್ದರು.
ಎಂಟನೇ ತರಗತಿಯಲ್ಲಿ ಕಲಿಯುತ್ತಿರುವ   ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಅರ್ಹರಾಗಿದ್ದು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಶಾಲಾ ಅವಧಿ ಹೊರತುಪಡಿಸಿ  ವಿಶೇಷ ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಆನ್ ಲೈನ್ ತರಬೇತಿ ಮಾತ್ರ ಆದ್ಯತೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.