ಸಂಪಾಜೆ: ಕಡೆಪಾಲ ಬಳಿ ಚಾಲಕ‌ನ ನಿಯಂತ್ರಣ ತಪ್ಪಿ ತೋಡಿಗೆ ಇಳಿದ ಈಚರ್ ಲಾರಿ

Advt_Headding_Middle

 

ಹಂಪ್ ಹಾಕಿದ ಬಳಿಕ ನಿರಂತರವಾಗಿ ನಡೆಯುತ್ತಿರುವ ರಸ್ತೆ ಅಪಘಾತ
ಚಾಲಕ‌ನ ನಿಯಂತ್ರಣ ತಪ್ಪಿದ ಈಚರ್ ಲಾರಿಯೊಂದು ಸೇತುವೆ ಹಾಗೂ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಪಕ್ಕದ ತೋಡಿಗೆ ಜಾರಿನಿಂತ ಘಟನೆ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪದ ಪಾಲಡ್ಕ ಎಂಬಲ್ಲಿ ಜು.24ರಂದು ಬೆಳಿಗ್ಗೆ ಸಂಭವಿಸಿದೆ.
ಮಂಗಳೂರಿನಿಂದ ಮೈಸೂರಿಗೆ ಮಣ್ಣಿನ ಇಟ್ಟಿಗೆ ಹೊತ್ತೊಯ್ಯುತ್ತಿದ್ದ ಈಚರ್ ಲಾರಿ ಸಂಪಾಜೆಯ ಕಡೆಪಾಲ ಸೇತುವೆ ಬಳಿ ತಲುಪುತ್ತಿದ್ದಂತೆ ಮುಂಭಾಗದಿಂದ ಬರುತ್ತಿದ್ದ ಕಾರೊಂದಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸೇತುವೆಯ ಬಲಭಾಗದಲ್ಲಿದ್ದ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ತೋಡಿಗೆ ಜಾರಿ ನಿಂತಿತೆನ್ನಲಾಗಿದೆ.
ಘಟನೆಯಲ್ಲಿ ಚಾಲಕ ಅಪಾಯದಿಂದ ಪಾರಾಗಿದ್ದು, ವಿದ್ಯುತ್ ಕಂಬ ಮುರಿದಿದ್ದು, ಲಾರಿ ಜಖಂಗೊಂಡಿದೆ ಎಂದು ತಿಳಿದುಬಂದಿದೆ.
ಕಡೆಪಾಲ ಪ್ರದೇಶದಲ್ಲಿ ನಿರಂತರವಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದ ಕಾರಣದಿಂದ ಲೋಕೋಪಯೋಗಿ ಇಲಾಖೆಯ ವತಿಯಿಂದ ಸೇತುವೆಯ ಎರಡೂ ಬದಿಗಳಲ್ಲಿ ಹಂಪ್ ಹಾಕಲಾಗಿತ್ತು. ಆದರೆ ಹಂಪ್ ಹಾಕಿದ ಬಳಿಕ ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ರಸ್ತೆ ಅಪಘಾತಗಳು ಸಂಭವಿಸುತ್ತಿದ್ದು, ಸಂಬಂಧಿಸಿದ ಇಲಾಖೆ ಗಮನಹರಿಸಬೇಕಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.