ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಕರ್ತವ್ಯಕ್ಕೆ ರಾಜ್ಯ ಆರೋಗ್ಯ ಸಚಿವ ಟ್ವೀಟ್ ಮೂಲಕ ಶ್ಲಾಘನೆ

Advt_Headding_Middle

ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳ ಕರ್ತವ್ಯವನ್ನು ರಾಜ್ಯ ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಶ್ಲಾಘಿಸಿದ್ದಾರೆ.
ಜೂ. 15 ರಂದು ಕೋವಿಡ್ ಪರೀಕ್ಷೆಗೆ ಗಂಟಲ ದ್ರವ ಸಂಗ್ರಹಿಸಲು ಆರೋಗ್ಯ ಇಲಾಖಾ ಸಿಬ್ಬಂದಿ ಪಿಪಿಇ ಕಿಟ್ ಧರಿಸಿ ದಟ್ಟವಾದ ಕಾಡಿನಲ್ಲಿ ನದಿಯ ಪಾಲ ದಾಟಿಕೊಂಡು ಹೋಗುತ್ತಿರುವ ಚಿತ್ರವನ್ನು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಟ್ವೀಟ್ ಮಾಡಿತ್ತು.
ಇದನ್ನು ಉಲ್ಲೇಖಿಸಿ ಆರೋಗ್ಯ ಸಚಿವ ಸುಧಾಕರ್ ಪ್ರವಾಹ ಪರಿಸ್ಥಿತಿ ನಡುವೆಯೂ ಕರ್ತವ್ಯ ಪ್ರಜ್ಞೆ ಮೆರೆದಿರುವ ಕೊಲ್ಲಮೊಗ್ರ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿಯ ಸೇವಾ ಮನೋಭಾವ ಹಾಗೂ ಕಾರ್ಯತತ್ಪರತೆ ಅನುಕರಣೀಯ ಎಂದು ಟ್ವೀಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಲ್ಮಕಾರು ಗ್ರಾಮದ ಇಡ್ಯಡ್ಕ ಎಂಬ ಪ್ರದೇಶದಲ್ಲಿ ಗಂಟಲ ಮಾದರಿ ಸಂಗ್ರಹಕ್ಕೆ ತೆರಳುತ್ತಿರುವ ಚಿತ್ರ ಇದಾಗಿದ್ದು, ಕೊಲ್ಲಮೊಗ್ರ ಆರೋಗ್ಯ ಕೇಂದ್ರಕ್ಕೆ ಲ್ಯಾಬ್ ಟೆಕ್ನೀಷಿಯನ್ ಆಗಿ ನೇಮಕಗೊಂಡಿದ್ದ ನವ್ಯ ಕೊಪ್ಪಡ್ಕ ಪಿಪಿಇ ಕಿಟ್ ಧರಿಸಿ ಹೋಗಿದ್ದರು. ಇವರೊಂದಿಗೆ ಎಎನ್‌ಎಂ ಚಂದ್ರಾವತಿ, ಆಶಾ ಕಾರ್ಯಕರ್ತೆಯರಾದ ಯಶೋಧಾ ಮತ್ತು ಹೇಮಾವತಿ ಅವರು ಕರ್ತವ್ಯ ಸಂದರ್ಭದಲ್ಲಿ ಪಾಲ ದಾಟುವುದನ್ನು ಸಚಿವರು ಶ್ಲಾಘಿಸಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.