ಸುಳ್ಯದಲ್ಲಿ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆ ಉದ್ಘಾಟನೆ

Advt_Headding_Middle

 

ಮೋದಿಯವರ ನಾಯಕತ್ವದಿಂದ ದೇಶದಲ್ಲಿ ಕ್ರಾಂತಿಕಾರಿ ಬದಲಾವಣೆ : ಪ್ರತಾಪಸಿಂಹ ನಾಯಕ್

 


ಬಡತನ ನಿರ್ಮೂಲನೆ, ಜನ್ ಧನ್ ಸೇರಿದಂತೆ ದೇಶದ ಜನರ ಶ್ರೇಯೋಭಿವೃದ್ಧಿಗಾಗಿ ಹೊಸ ಹೊಸ ಯೋಜನೆಯನ್ನು ತಂದಿರುವ ನರೇಂದ್ರ ಮೋದಿಯವರ ನೇತೃತ್ವದ ಸರಕಾರ ದೇಶದಲ್ಲಿ ಬದಲಾವಣೆಯ ಕ್ರಾಂತಿಯನ್ನೇ ಮಾಡಿದೆ. ಇದೆಲ್ಲವೂ ಮೋದಿಯವರ ಸಧೃಡ ನಾಯಕತ್ವದಿಂದ ಸಾಧ್ಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹೇಳಿದರು.

ಜು.26 ರಂದು ಸುಳ್ಯದ ಕೊಡಿಯಾಲಬೈಲು ಗೌಡ ಸಮುದಾಯ ಭವನದಲ್ಲಿ ನಡೆದ ಸುಳ್ಯ ಬಿಜೆಪಿ ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಜನರು ಮೋದಿಯವರ ನಾಯಕತ್ವದಲ್ಲಿ ವಿಶ್ವಾಸ ಇಟ್ಟಿದ್ದಾರೆ. ಭ್ರಷ್ಟಾಚಾರ ರಹಿತ ಆಡಳಿತ ಮೋದಿಯವರ ನೇತೃತ್ವದಲ್ಲಿ ನಡೆಯುತ್ತಿದೆ ಎಂದ ಅವರು, ಕಾಂಗ್ರೆಸ್ ಅಪಪ್ರಚಾರದಲ್ಲಿ ತೊಡಗಿದೆ. ಅವರು ಅದಕ್ಕೆಂದೇ ಇರುವವರು. ಒಳ್ಳೆಯ ಕೆಲಸ ಸಹಿಸಿಕೊಳ್ಳುವ ಶಕ್ತಿ ಅವರಿಗಿಲ್ಲ” ಎಂದು ಹೇಳಿದರು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೊರೊನಾದ ಸಂದರ್ಭದಲ್ಲಿ ನಮ್ಮ ಕಾರ್ಯಕರ್ತರು ಗ್ರಾಮ ಗ್ರಾಮದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಕೆಲವು ತಿಂಗಳ ನಂತರ ನಡೆಯುವ ಕಾರ್ಯಕಾರಿಣಿಗೆ ಬರುವುದಿಲ್ಲವಾದರೆ ನಾವು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯತೆ ಇದೆ. ಪಕ್ಷದಲ್ಲಿ ತೊಡಗಿಸಿಕೊಳ್ಳುವ ವರಿಗೆ ಅವಕಾಶ ನೀಡಬೇಕಾಗಿದೆ ಎಂದು ಹೇಳಿದ ಅವರು ಸುಳ್ಯ ತಾಲೂಕಿನಲ್ಲಿ ಪಕ್ಷವನ್ನು ಬಲಪಡಿಸಲು ಮತ್ತಷ್ಟು ತೊಡಗಿಸಿಕೊಳ್ಳಬೇಕು. ಕೇಂದ್ರ, ರಾಜ್ಯ ಸರಕಾರದ ಯೋಜನೆಯನ್ನು ಮನೆ ಮನೆಗೆ ತಿಳಿಸುವ ಕೆಲಸ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಸಹಪ್ರಭಾರಿ ರಾಜೇಶ್ ಕಾವೇರಿ, ಜಿಲ್ಲಾ ಉಪಾಧ್ಯಕ್ಷ ರಾಧಾಕೃಷ್ಣ ಬೂಡಿಯಾರ್ ವೇದಿಕೆಯಲ್ಲಿದ್ದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಇಂದಿರಾ ವಂದಿಸಿದರು.

ಕಾರ್ಗಿಲ್ ವಿಜಯ ದಿವಸ್ : ಸಮಾರಂಭದಲ್ಲಿ ಕಾರ್ಗಿಲ್ ವಿಜಯ್ ದಿವಸದ ನೆನಪನ್ನು ಮಾಡಿಕೊಳ್ಳಲಾಯಿತು. ಹಾಗೂ ಇತ್ತೀಚೆಗೆ ಅಗಲಿದ ನಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ವಿವಿಧ ಪ್ರಕೋಷ್ಟದ ಸಂಚಾಲಕರು, ಸಹಸಂಚಾಲಕರನ್ನು ಗೌರವಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.