ಕೇರಳ ಹಾಗೂ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಕಟ್ಟುನಿಟ್ಟಿನ ನಿಯಮಾವಳಿ: ಸರಕಾರದ ಆದೇಶ

Advt_Headding_Middle

ಕೇರಳ ಹಾಗೂ ಮಹಾರಾಷ್ಟ್ರದಲ್ಲಿನ ಕೊರೋನಾ ಹೆಚ್ಚಳದ ಹಿನ್ನಲೆಯಲ್ಲಿ ಈ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಶೇಷ ಸರ್ವೇಕ್ಷಣಾ ಚಟುವಟಿಕೆಗಳನ್ನು ಕಡ್ಡಾಯಗೊಳಿಸಿ ಸರಕಾರ ಆದೇಶ ಹೊರಡಿಸಿದೆ.
ಕೇರಳ ಹಾಗೂ ಮಹಾರಾಷ್ಟ್ರದಿಂದ ಬರುವವರು ಕೋವಿಡ್ 19 ಲಸಿಕೆಯ ಎರಡೂ ಡೋಸ್‌ಗಳನ್ನು ಪಡೆದಿದ್ದರೂ, ಪಡೆಯದಿದ್ದರೂ ಕೂಡ 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿ-ಪಿಸಿಆರ್ ಪರೀಕ್ಷೆಯ ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿದೆ.


ವಿಮಾನ, ರೈಲು, ರಸ್ತೆ ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಮೇಲಿನ ನಿಯಮದ ಪಾಲನೆಯು ಕಡ್ಡಾಯವಾಗಿದೆ. ಕೇರಳ ಮತ್ತು ಮಹಾರಾಷ್ಟ್ರದಿಂದ ಹೊರಡುವ ಎಲ್ಲಾ ವಿಮಾನಗಳಿಗೂ ಅನ್ವಯವಾಗುತ್ತದೆ.
ಬಸ್‌ನ ಮೂಲಕ ಪ್ರಯಾಣಿಸುವವರು ಆರ್‌ಟಿ-ಪಿಸಿಆರ್ ನೆಗೆಟಿವ್ ಟೆಸ್ಟ್ ವರದಿಯನ್ನು ಹೊಂದುವುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿಯು ಆಯಾ ಬಸ್ ನಿರ್ವಾಹಕರದ್ದಾಗಿದೆ.
ಕೇರಳದಿಂದ ಕರ್ನಾಟಕಕ್ಕೆ ವಿದ್ಯಾಭ್ಯಾಸ, ಕಛೇರಿ ಕೆಲಸ, ವ್ಯಾಪಾರ-ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ದೈನಂದಿನವಾಗಿ ಭೇಟಿ ನೀಡುವವರು ಪ್ರತಿ ೧೫ ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು, ನೆಗೆಟಿವ್ ವರದಿಯನ್ನು ಹೊಂದುವುದು ಕಡ್ಡಾಯವಾಗಿದೆ.
ಕೇರಳಕ್ಕೆ ಹೊಂದಿಕೊಂಡಿರುವ ಕರ್ನಾಟಕದ ಗಡಿ ಜಿಲ್ಲೆಗಳಾದ ದಕ್ಷಿಣಕನ್ನಡ, ಕೊಡಗು ಮತ್ತು ಮೈಸೂರು ಹಾಗೂ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಕಲಬುರಗಿ ಮತ್ತು ಬೀದರ್ ಮೂಲಕ ರಾಜ್ಯಕ್ಕೆ ಪ್ರವೇಶಿಸುವ ವಾಹನಗಳಿಗೆ ಮೇಲೆ ತಿಳಿಸಿರುವ ನಿಯಮಗಳ ಅನುಪಾಲನೆಗೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸುವುದು ಹಾಗೂ ಅಗತ್ಯ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸುವ ಜವಾಬ್ದಾರಿಯು ಆಯಾ ಜಿಲ್ಲಾಧಿಕಾರಿಗಳದ್ದಾಗಿದೆ.
ಸಾಂವಿಧಾನಿಕ ಕಾರ್ಯಕಾರಿಗಳು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿಗಳು, ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಆರ್‌ಟಿ-ಪಿಸಿಆರ್ ನೆಗೆಟಿವ್ ಟೆಸ್ಟ್ ವರದಿ ಹೊಂದುದರಿಂದ ವಿನಾಯಿತಿ ನೀಡಲಾಗಿದೆ.
ಕೇರಳದಿಂದ ತುರ್ತು ಸಂದರ್ಭದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರ ಮಾದರಿಗಳನ್ನು ಪರೀಕ್ಷೆಗಾಗಿ ಕರ್ನಾಟಕದಲ್ಲಿಯೇ ಸಂಗ್ರಹಿಸಲಾಗುವುದು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.