ಸುಬ್ರಹ್ಮಣ್ಯ ಎಸ್‌ಎಸ್‌ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ

Advt_Headding_Middle

 

 

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಕ್ಕೊಳಪಟ್ಟ ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜು.30 ರಂದು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ ವಹಿಸಿದ್ದರು. ಕೆ.ಎಸ್.ಎಸ್.ಕಾಲೇಜಿನ ಪ್ರಾಂಶುಪಾಲ ಡಾ.ಗೋವಿಂದ ಎನ್.ಎಸ್, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಪ್ರಸನ್ನ ದರ್ಬೆ, ಶೋಭಾ ಗಿರಿಧರ್, ಮಾಸ್ಟರ್‌ಪ್ಲಾನ್ ಮೇಲುಸ್ತುವಾರಿ ಸಮಿತಿ ಸದಸ್ಯ ಮನೋಜ್ ಸುಬ್ರಹ್ಮಣ್ಯ ಮುಖ್ಯ ಅತಿಥಿಗಳಾಗಿದ್ದರು.ಎಸ್.ಎಸ್.ಪಿ.ಯು.ಕಾಲೇಜಿನ ಪ್ರಾಂಶುಪಾಲೆ ಸಾವಿತ್ರಿ.ಕೆ, ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಜೇಶ್ ಎನ್.ಎಸ್, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಆರತಿ, ತರಗತಿ ಉಪನ್ಯಾಸಕರಾದ ಜಯಶ್ರೀ.ವಿ.ದಂಬೆಕೋಡಿ, ಜಯಪ್ರಕಾಶ್.ಆರ್, ಶ್ರೀಧರ್ ಪುತ್ರನ್, ಪ್ರವೀಣ್ ಎರ್ಮಾಯಿಲ್ ವೇದಿಕೆಯಲ್ಲಿದ್ದರು.
ಸಮಾರಂಭದಲ್ಲಿ ೨೦೨೧ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ತರಗತಿವಾರು ಅತೀ ಹೆಚ್ಚು ಅಂಕ ಗಳಿಸಿದ ದೀಪ್ತಿ.ಎ, ಹೇಮಂತ್ ಎಚ್.ಕೆ, ಆಶಿಕಾ ಎಚ್.ಎಚ್, ಅನಂತ.ಎ, ಕುಲದೀಪ್, ಚೈತನ್ಯಾ.ಕೆ, ತರುಣ್.ಎನ್, ಮುರುಗ ಕೆ.ಸಿ, ದೀಕ್ಷಾ ಎಂ.ಡಿ, ದೀಪ್ತಿ ಪಿ.ಆರ್ ಅವರನ್ನು ಕುಕ್ಕೆ ದೇವಳದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿನಿ ವೈಷ್ಣವಿ ಪ್ರಾರ್ಥನೆ ಹಾಡಿದರು. ಉಪಪ್ರಾಂಶುಪಾಲೆ ರೇಖಾರಾಣಿ ಸೋಮಶೇಖರ್ ಸ್ವಾಗತಿಸಿದರು.ಆಂಗ್ಲ ಭಾಷಾ ಉಪನ್ಯಾಸಕ ಸೋಮಶೇಖರ ನಾಯಕ್ ಪ್ರಸ್ತಾಪಿಸಿದರು. ಹಿಂದಿ ಉಪನ್ಯಾಸಕ ಎ.ಮೋಹನ ಗೌಡ ವಂದಿಸಿದರು. ಉಪನ್ಯಾಸಕ ರತ್ನಾಕರ ಸುಬ್ರಹ್ಮಣ್ಯ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಶ್ರೀ ದೇವಳದ ಆಡಳಿತಕ್ಕೊಳಪಟ್ಟ ಕೆ.ಎಸ್.ಎಸ್.ಕಾಲೇಜಿನ ಕುರಿತು ಪ್ರಾತ್ಯಕ್ಷಿಕೆ ನೆರವೇರಿತು. ವಿದ್ಯಾಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಪೂರೈಸಿ ನಿರ್ಗಮಿಸುತ್ತಿರುವ ವಿದ್ಯಾರ್ಥಿಗಳು, ಉಪನ್ಯಾಸಕರು, ಸಿಬ್ಬಂಧಿಗಳು ಉಪಸ್ಥಿತರಿದ್ದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.