ಕನಕಮಜಲು : ಸ್ವರ್ಣ ಮಹಿಳಾ ಮಂಡಲ ಮಹಾಸಭೆ

Advt_Headding_Middle

 

 

ಕನಕಮಜಲು ಸ್ವರ್ಣ ಮಹಿಳಾ ಮಂಡಲ ಇದರ ಮಹಾಸಭೆ ಹಾಗೂ ಪದಗ್ರಹಣ ಕಾರ್ಯಕ್ರಮವು ಶ್ರೀ ಆತ್ಮ ರಾಮ ಭಜನಾ ಮಂದಿರ ಕನಕಮಜಲು ಜು. 31ರಂದು ಶ್ರೀಮತಿ ಕೃತಿಕಾ ಗುರುಪ್ರಸಾದ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ತಾಲೂಕು ಮಹಿಳಾ ಒಕ್ಕೂಟದ ಗೌರವಾಧ್ಯಕ್ಷರಾದ ಶ್ರೀಮತಿ ಗುಣವತಿ ಕೊಲ್ಲಂತಡ್ಕ, ಶ್ರೀಮತಿ ಶಾರದಾ ಉಗ್ಗಮೂಲೆ ಕನಕಮಜಲು ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಮಹಿಳಾ ಮಂಡಲದ ಕಾರ್ಯದರ್ಶಿಯಾದ ಶ್ರೀಮತಿ ಪ್ರೇಮ ಅಡ್ಕಾರ್ ಉಪಸ್ಥಿತಿಯಿದ್ದರು.
ನೂತನ ಅಧ್ಯಕ್ಷರಾಗಿ ಶ್ರೀಮತಿ ಸುಶೀಲಾ ಮಗೇಶ್ವರ ಕಾರಿಂಜ,ಕಾರ್ಯದರ್ಶಿಯಾಗಿ ಶ್ರೀಮತಿ ರಕ್ಷಿತಾ ಸತ್ಯಕುಮಾರ್ ದೇರ್ಕಜೆ ಉಪಾಧ್ಯಕ್ಷರಾಗಿ ಶ್ರೀಮತಿ ಶ್ಯಾಮಲ ಪೆರುಂಬಾರ್, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಗೀತಾ ಅಡ್ಕಾರ್, ಹಾಗೂ ಶ್ರೀಮತಿ ಪೂರ್ಣಿಮಾ ಮಾಣಿಕೋಡಿ, ಶ್ರೀಮತಿ ರಶ್ಮಿ ಕಣಜಾಲ್,ಶ್ರೀಮತಿ ಶಾರದಾ ಉಗ್ಗಮೂಲೆ, ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು. ಜೊತೆಗೆ ಸಲಹಾ ಸಮಿತಿಯನ್ನು ರಚಿಸಲಾಯಿತು. ಶ್ರೀಮತಿ ಕುಸುಮ ಅಡ್ಕಾರ್ ಪ್ರಾರ್ಥಿಸಿದರು . ಶ್ರೀಮತಿ ಸುಮತಿ ಕುತ್ಯಾಳ ಕಾರ್ಯಕ್ರಮ ನಿರ್ವಹಿಸಿದರು. ಶ್ರೀಮತಿ ವಾರಿಜಕೋಡ್ತಿಲು ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.