ಸಂಪಾಜೆ: ಗ್ರಾ.ಪಂ.- ಸೊಸೈಟಿ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಆಚರಣೆಗೆ ನಿರ್ಧಾರ

Advt_Headding_Middle

 

ಗ್ರಾಮದ ಹತ್ತು ಮಂದಿ ಸಾಧಕರನ್ನು ಗುರುತಿಸುವಿಕೆ

ಸ್ವಾತಂತ್ರ್ಯೋತ್ಸವ ನಡಿಗೆ, ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ


ಸಂಪಾಜೆ ಗ್ರಾಮ ಪಂಚಾಯತಿ ನೇತೃತ್ವದಲ್ಲಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಈ ಬಾರಿಯ 75ನೇ ವರ್ಷದ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವನ್ನು ಆಚರಿಸುವುದೆಂದು ನಿರ್ಧರಿಸಲಾಯಿತು. ಸಂಪಾಜೆ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಆ.2ರಂದು ಜರುಗಿದ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಗ್ರಾಮ ಪಂಚಾಯತಿ ಅಧ್ಯಕ್ಷ ಜಿ.ಕೆ. ಹಮೀದ್ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್ ಕೊಯಿಂಗಾಜೆ ಮಾತನಾಡಿ ಆ. 15ರಂದು ಸ್ವಾತಂತ್ರ್ಯೋತ್ಸವದ ದಿನ ಬೆಳಿಗ್ಗೆ ಸಂಪಾಜೆ ಕೂಲಿಶೆಡ್ ಬಳಿಯಿಂದ ಗ್ರಾ.ಪಂ. ವರೆಗೆ ಸ್ವಾತಂತ್ರ್ಯೋತ್ಸವ ನಡಿಗೆ ಬಳಿಕ ರಾಷ್ಟ್ರ ಧ್ವಜಾರೋಹಣ, ಸಭಾ ಕಾರ್ಯಕ್ರಮ ನಡೆಯಲಿದ್ದು, ಈ ಸಂದರ್ಭದಲ್ಲಿ ಗ್ರಾಮದ ಹತ್ತು ಸಾಧಕರನ್ನು ಗುರುತಿಸಿ, ಗೌರವಿಸಲಾಗುವುದು , ಶಾಲಾ ಮಕ್ಕಳಿಗೆ ವಿವಿಧ ಆಟೋಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು, ಜಿಲ್ಲೆಯಲ್ಲಿ ಕೋವಿಡ್ ನಿರ್ಬಂಧಕ್ಕೆ ಅನುಗುಣವಾಗಿ ವಿವಿಧ ಸ್ಪರ್ಧೆಗಳು ನಡೆಸುವುದೆಂದು ತೀರ್ಮಾನಿಸಲಾಯಿತು.
ಬಳಿಕ ವಿಜೇತರಿಗೆ ಬಹುಮಾನ ವಿತರಣೆ ನಡೆಸಲಾಗುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸುದ್ದಿ ವರದಿಗಾರ ಕೃಷ್ಣ ಬೆಟ್ಟ ಅವರು ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಮತ್ತು ಉತ್ತಮ ಇಲಾಖೆ ಮತ್ತು ಅಧಿಕಾರಿ, ಸಿಬ್ಬಂದಿಗಳನ್ನು ಆಯ್ಕೆ ಮಾಡುವ ಬಗ್ಗೆ ಮಾತನಾಡಿದರು.
ಜೊತೆಗೆ ಶಾಸಕರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಮಾಡಿದ ಉತ್ತಮ ಎರಡು ಕೆಲಸ ಹಾಗೂ ಶಾಸಕರು ಮಾಡಬೇಕಾದ ಉತ್ತಮ ಕೆಲಸಕ್ಕೆ ಓಟಿಂಗ್ ನಡೆಸುವ ಬಗ್ಗೆ ವಿವರಿಸಿದರು.
ಈ ಸಂದರ್ಭದಲ್ಲಿ ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಮಹಮ್ಮದ್ ಕುಂಞಿ ಗೂನಡ್ಕ, ಗ್ರಾ.ಪಂ. ಉಪಾಧ್ಯಕ್ಷೆ ಲಿಸ್ಸಿ ಮೊನಾಲಿಸಾ, ಸದಸ್ಯರುಗಳಾದ ಕೆ.ಆರ್. ಜಗದೀಶ್ ರೈ ಸಂಪಾಜೆ, ಎಸ್.ಕೆ.ಹನೀಫ್, ಸುಂದರಿ ಮುಂಡಡ್ಕ, ಸುಮತಿ ಶಕ್ತಿವೇಲು, ಅಬುಸಾಲಿ ಗೂನಡ್ಕ, ಅನುಪಮ ಜಿ, ರಜನಿ ಎಸ್.ಎಲ್., ವಿಮಲ ವಿ, ಸುಶೀಲ, ಎ.ಎಸ್. ವಿಜಯ್ , ಗ್ರಾಮ ಲೆಕ್ಕಾಧಿಕಾರಿಗಳು ಉಪಸ್ಥಿತರಿದ್ದರು.ಗ್ರಾ.ಪಂ. ಸದಸ್ಯ ಶೌವಾದ್ ಗೂನಡ್ಕ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.