ಬೆಳ್ಳಾರೆ: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ , ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆ ವತಿಯಿಂದ ಆಟಿದ ಪೊಲಬು

Advt_Headding_Middle

ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು, ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಸುಳ್ಯ ತುಡರ್ ಕೂಟ, ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಸಹಯೋಗದಲ್ಲಿ ಆಟಿದ ಪೊಲಬು ಆಚರಣೆಯು ಬೆಳ್ಳಾರೆಯ ದೇವಿ ಹೈಟ್ಸ್ ಸಭಾಂಗಣದಲ್ಲಿ ಆ.3ರಂದು ಜರುಗಿತು.


ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಸುಳ್ಯ ತಾಲೂಕು ಅಧ್ಯಕ್ಷ ಉಮೇಶ್ ಮಣಿಕ್ಕಾರ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್ ಅವರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಹಿರಿಯ ದೈವ ನರ್ತಕ ಬಾಬು ಅಜಿಲ ಹಾಗೂ ಹಿರಿಯ ನಾಟಿ ವೈದ್ಯ ರಾಧಾಕೃಷ್ಣ ರೈ ವೈಪಾಲ ಅವರನ್ನು ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಹಾಗೂ ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯ ವತಿಯಿಂದ ಗುರುತಿಸಿ , ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾ ಜರ್ನಲಿಸ್ಟ್ ಯೂನಿಯನ್ ಅಧ್ಯಕ್ಷ ಹರೀಶ್ ಬಂಟ್ವಾಳ್, ಬೆಳ್ಳಾರೆ ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಪನ್ನೆ, ಪೆರುವಾಜೆ ಗ್ರಾ.ಪಂ. ಅಧ್ಯಕ್ಷ ಜಗನ್ನಾಥ ಪೂಜಾರಿ ಮುಕ್ಕೂರು, ಬೆಳ್ಳಾರೆ ಸ್ನೇಹಿತರ ಕಲಾ ಸಂಘದ ಅಧ್ಯಕ್ಷ ಸಂಜಯ್ ನೆಟ್ಟಾರು, ಬೆಳ್ಳಾರೆ ಟೌನ್ ರೋಟರಿ ಕ್ಲಬ್ ಅಧ್ಯಕ್ಷ ಪದ್ಮನಾಭ ಬೀಡು, ಬೆಳ್ಳಾರೆ ಜೇಸಿಐ ಅಧ್ಯಕ್ಷ ಪದ್ಮನಾಭ ನೆಟ್ಟಾರು, ಬೆಳ್ಳಾರೆ ಸ್ನೇಹಶ್ರೀ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಹೊನ್ನಮ್ಮ ಬಸ್ತಿಗುಡ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.