ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಮತ್ತೆ ಬಂತು ನಿರ್ಬಂಧ

Advt_Headding_Middle

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದರ್ಶನಕ್ಕೆ ಮಾತ್ರ ಅವಕಾಶ

ವಾರಾಂತ್ಯದಲ್ಲಿ ಭಕ್ತರ ಪ್ರವೇಶ ಸಂಪೂರ್ಣ ನಿಷೇಧ

ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿದ್ದು, ದ.ಕ.ಜಿಲ್ಲೆಗೆ ಓಡಾಟದಿಂದಾಗಿ ಸೋಂಕು ಹೆಚ್ಚಾಗುವ ಹಿನ್ನೆಲೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಪಟ್ಟ ಹಾಗೆ ಆ.15 ರವರೆಗೆ ಕೆಲವು ನಿರ್ಬಂಧಗಳನ್ನು ವಿಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ಮಾತ್ರ ದೇಗುಲ ತೆರೆದಿರುತ್ತದೆ. ಈ ಸಂದರ್ಭದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ತೀರ್ಥ ಪ್ರಸಾದ, ಸೇವೆಗಳು, ಅನ್ನ ಸಂತರ್ಪಣೆಗೆ ಅವಕಾಶವಿಲ್ಲ.
ಶನಿವಾರ ಮತ್ತು ಭಾನುವಾರ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ವಸತಿ ಗೃಹಗಳಲ್ಲಿ ತಂಗುವುದಾಗಲೀ, ದೇವರ ದರ್ಶನಕ್ಕಾಗಲೀ ಅವಕಾಶವಿಲ್ಲ. ವಾರಾಂತ್ಯ ಹೊರತುಪಡಿಸಿ ಉಳಿದ ದಿನಗಳಲ್ಲಿ ವಸತಿ ಗೃಹಗಳಲ್ಲಿ ತಂಗಲು ಬಯಸುವವರು 72 ಗಂಟೆಯೊಳಗೆ ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಮಾಡಿಸಿ, ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯವಾಗಿ ಹೊಂದಿರಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.