ಮಡಪ್ಪಾಡಿ : 75ನೇ ವರ್ಷದ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆ

Advt_Headding_Middle

 

ಗ್ರಾಮದ ಪ್ರತಿ ಮನೆಯಲ್ಲಿ ಧ್ವಜಾರೋಹಣ, ಸ್ವಾತಂತ್ರ್ಯದ ನಡಿಗೆ, ಸ್ಪರ್ಧೆಗಳೊಂದಿಗೆ ಆಚರಿಸಲು ನಿರ್ಧಾರ

ಮಡಪ್ಪಾಡಿ ಗ್ರಾಮ ಪಂಚಾಯತ್ ವತಿಯಿಂದ 75ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸುವುದೆಂದು ನಿರ್ಧರಿಸಲಾಯಿತು. ಅ.4ರಂದು ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಗ್ರಾಮದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.
ಸಭೆಯ ಅಧ್ಯಕ್ಷತೆಯನ್ನು ಪಂಚಾಯತ್ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ವಹಿಸಿದ್ದರು.
ಸ್ವಾತಂತ್ರ್ಯದ ದಿನ ಬೆಳಿಗ್ಗೆ ಪ್ರತಿ ಮನೆಯಲ್ಲಿ ಧ್ವಜಾರೋಹಣ ಮಾಡುವಂತೆ, ಬಳಿಕ ಸ್ವಾತಂತ್ರ್ಯ ದ ನಡಿಗೆಯಲ್ಲಿ ಬಂದು ಪಂಚಾಯತ್ ನಲ್ಲಿ ಧ್ವಜಾರೋಹಣ ನಡೆಸಿ ಅಲ್ಲಿಂದ ಮಡಪ್ಪಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಧ್ವಜಾರೋಹಣ ಮಾಡುವುದು ಹಾಗೂ ಸ್ಪರ್ಧೆಗಳನ್ನು ನಡೆಸುವುದು ಮುಂತಾದ ಬಗ್ಗೆ ನಿರ್ಧರಿಸಲಾಯಿತು. ಈ ಬಗ್ಗೆ ಮಾಹಿತಿಯನ್ನೊಳಗೊಂಡ ಕರಪತ್ರವನ್ನು ಹಂಚುವ ಬಗ್ಗೆಯೂ ನಿರ್ಧರಿಸಲಾಯಿತು.
ವೇದಿಕೆಯಲ್ಲಿ ಉಪಾಧ್ಯಕ್ಷೆ ಉಷಾ ಜಯರಾಮ, ಸದಸ್ಯ ಜಯರಾಮ ಹಾಡಿಕಲ್ಲು, ಮಡಪ್ಪಾಡಿ ಪ್ರಾ.ಕೃ.ಪ.ಸ.ಸಂಘದ‌ ಅಧ್ಯಕ್ಷ ಪಿ.ಸಿ.ಜಯರಾಮ ಉಪಸ್ಥಿತರಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಧನಪತಿ ಸ್ವಾಗತಿಸಿ, ಸ್ವಾತಂತ್ರ್ಯ ಆಚರಣೆಯ ಬಗ್ಗೆ ಪ್ರಸ್ತಾವಿಕವಾಗಿ ಮಾತನಾಡಿದರು. ಸುದ್ದಿ ವರದಿಗಾರ ದಯಾನಂದ‌ ಕೊರತ್ತೋಡಿ ಸ್ವಾತಂತ್ರ್ಯ ಆಚರಣೆಯಲ್ಲಿ ಸುದ್ದಿಯ ಆಶಯದ ಬಗ್ಗೆ ವಿವರಿಸಿದರು. ಸಭೆಯಲ್ಲಿ ಮಾಜಿ ಅಧ್ಯಕ್ಷೆ ಶಕುಂತಲಾ ಕೇವಳ, ಕೃಷಿಕ ಮುಖಂಡ ಎಂ.ಡಿ.ವಿಜಯಕುಮಾರ್, ಸುದ್ದಿ ವರದಿಗಾರ ವೆಂಕಟೇಶ್ ಮುಂಡೋಳಿಮೂಲೆ, ಪ್ರತಿನಿಧಿ ಕೀರ್ತನ್ ಕೊಡಪಾಲ ಹಾಗೂ ಪಂಚಾಯತ್ ಸದಸ್ಯರು, ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.