ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಮಹಿಳಾ ಮೋರ್ಚಾ ವತಿಯಿಂದ ಕಾರ್ಯನಿರ್ವಾಹಣಾ ಸಭೆ

Advt_Headding_Middle

 

 

ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಮಹಿಳಾ ಮೋರ್ಚಾವತಿಯಿಂದ ಕಾರ್ಯನಿರ್ವಾಹಣಾ ಸಭೆಯು ಬಿಜೆಪಿ ಕಚೇರಿ ಸಭಾಂಗಣದಲ್ಲಿ ಆ. 26ರಂದು ನಡೆಯಿತು. ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಕಾರ್ಯನಿರ್ವಾಹಣಾ ತಂಡದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಚನೆಗಳ ಬಗ್ಗೆ ಹೇಳಿದ್ದಲ್ಲದೇ ಈ ಯೋಜನೆಗಳ ಉಪಯೋಗವನ್ನು ಜನಸಾಮಾನ್ಯರಿಗೆ ತಲುಪಿಸುವ ಕೆಲಸಕಾರ್ಯಗಳನ್ನು ನಾವೆಲ್ಲರೂ ಮಾಡಬೇಕು,ಮುಂಬರುವ ಜಿಲ್ಲಾ ಪಂಚಾಯತ್ ತಾಲೋಕ್ ಪಂಚಾಯತ್ ಚುನಾವಣೆಯಲ್ಲಿ ಹೆಚ್ಚಿನ ಎಲ್ಲಾ ಕ್ಷೇತ್ರದಲ್ಲಿ ಭಾರತೀಯ ಜನತಾ ಪಾರ್ಟಿ ಮೇಲುಗೈ ಸಾಧಿಸುವ ನಿಟ್ಟಿನಲ್ಲಿ ನಾವೆಲ್ಲರೂ ಇನ್ನಷ್ಟು ಕೆಲಸ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು. ಮಹಿಳಾ ಮೋರ್ಚಾದ ಸದಸ್ಯರು ಉತ್ತಮ ಕೆಲಸಕಾರ್ಯಗಳನ್ನು ಮಾಡುತ್ತಿದ್ದೀರಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕೆಲಸಕಾರ್ಯಗಳಲ್ಲಿ ತೊಡಗಿಕ್ಕೊಳ್ಳಿ ಎಂದು ಹೇಳಿದರು.
ಸಂಘಟಣಾತ್ಮಕ ಅವಧಿಯಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ತ್ರಿವೇಣಿ ಪೆರೂವೋಡ್ ಯವರು ಸರಕಾರದ ಹೊಸ ಯೋಜನೆಗಳು ಹಾಗೂ ಮಂಡಲಗಳು ಮುಂದಿನ ದಿನಗಳಲ್ಲಿ ಮಾಡಬೇಕಾದ ಕೆಲಸ ಕಾರ್ಯಗಳ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಭಗೀರಥಿ ಮುರುಳ್ಯ ಹಾಗೂ ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರಭಾ ಆಚಾರ್ಯ, ಮಹಿಳಾ ಮೋರ್ಚಾ ಅಧ್ಯಕ್ಷರು, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷರು ಪುಷ್ಪವತಿ ಬಾಲಿಲ, ಮಹಿಳಾ ಮೋರ್ಚಾ ಪ್ರಧಾನಕಾರ್ಯದರ್ಶಿ ಗೀತಾ ಶೇಖರ್ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದಲ್ಲಿ ಸುಭೋದ್ ಶೆಟ್ಟಿ ಮೇನಾಲ ಅವರು ಪಕ್ಷಸಂಘಟನೆ ಹೇಗೆ ಮಾಡಬೇಕು ಎಂದು ತಿಳಿಸಿದರು. ಪಕ್ಷದಲ್ಲಿ ಕೆಲಸ ಮಾಡುವಾಗ ಕೆಲವೊಮ್ಮೆ ನಮಗೆ ಮನಸ್ಸಿಗೆ ನೋವಾಗೋ ಸಂದರ್ಭವು ಬರಬವುದು ಅದನ್ನೆಲ್ಲ ಮನಸ್ಸಿಗೆ ಹಚ್ಚಿಕೊಳ್ಳದೆ ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಇನ್ನು ಹಲವಾರು ವಿಚಾರಗಳ ಬಗ್ಗೆ ಸಮಾರೂಪ ಭಾಷಣ ಮಾಡಿದರು.

ಮಹಿಳಾ ಅಧ್ಯಕ್ಷರು, ಮಹಿಳಾ ಮೋರ್ಚಾದ ಉಪಾಧ್ಯಕ್ಷರು, ಕಾರ್ಯಧರ್ಶಿ ಗಳು ಕೋಶಾಧಿಕಾರಿ, ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪ್ರಧಾನಕಾರ್ಯದರ್ಶಿ ಗೀತಾ ಶೇಖರ್ ಸ್ವಾಗತಿಸಿದರು. ಹಾಗೂ ಪ್ರಧಾನ ಕಾರ್ಯದರ್ಶಿ ತೇಜಸ್ವಿನಿ ಶೇಖರ್ ಕಾರ್ಯಕ್ರಮ ನಿರೂಪಣೆ ಮಾಡಿ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.