Breaking News

ಮಡಿಕೇರಿ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮ

Advt_Headding_Middle

 

 

ಸಚಿವ ಅಂಗಾರರಿಂದ ಉದ್ಘಾಟನೆ ಅರೆಭಾಷೆ ಅಕಾಡೆಮಿಯ ವೆಬ್ ಸೈಟ್ ಗೆ ಚಾಲನೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಗೊಂಡು ಹತ್ತು ವರ್ಷ ಪೂರ್ತಿಗೊಂಡ ಹಿನ್ನೆಲೆಯಲ್ಲಿ ಅಕಾಡೆಮಿಯ ವತಿಯಿಂದ ದಶ ವರ್ಷ ಸಂಭ್ರಮದ ಉದ್ಘಾಟನಾ ಸಮಾರಂಭವು ಮಡಿಕೇರಿಯ ಕೊಡಗು ಗೌಡ ಸಮಾಜದಲ್ಲಿ ಆ.27ರಂದು ನಡೆಯಿತು.
ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಎಸ್. ಅಂಗಾರರು ದೀಪ ಬೆಳಗಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭಹಾರೈಸಿದರು. ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ ಕಳೆದ ಹತ್ತು ವರ್ಷಗಳಲ್ಲಿ ಅರೆಭಾಷೆ ಅಕಾಡೆಮಿ ಬೆಳೆದು ಬಂದ ದಾರಿಯನ್ನು ವಿವರಿಸಿದರು.
ಮುಖ್ಯ ಅತಿಥಿಗಳಾಗಿ ವಿರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಎಂ.ಪಿ.,ವಿಧಾನ ಪರಿಷತ್ ಸದಸ್ಯರುಗಳಾದ ಎಂ.ಪಿ. ಸುನಿಲ್ ಸುಬ್ರಮಣಿ, ಶ್ರೀಮತಿ ಶಾಂತೆಯಂಡ ವೀಣಾ ಅಚ್ಚಯ್ಯ, ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಭಾಗವಹಿಸಿದ್ದರು.
ಅತಿಥಿಗಳಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರುಗಳಾದ ಕೊಲ್ಯದ ಗಿರೀಶ್, ಪಿ.ಸಿ. ಜಯರಾಮ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಆರ್. ಸೋಮಣ್ಣ, ಕೊಡಗು ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ, ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರರಾದ ಅಂಕಿತಾ ಸುರೇಶ್, ಅರೆಭಾಷೆ ಅಕಾಡೆಮಿಯ ಸದಸ್ಯರುಗಳಾದ ಶ್ರೀಮತಿ ಬೈತಡ್ಕ ಜಾನಕಿ ಬೆಳ್ಯಪ್ಪ, ಶ್ರೀಮತಿ ಸ್ಮಿತಾ ಅಮೃತರಾಜ್, ಶ್ರೀಮತಿ ಚೊಕ್ಕಾಡಿ ಪ್ರೇಮ ರಾಘವಯ್ಯ, ಧನಂಜಯ ಅಗೋಳಿಕಜೆ, ದಂಬೆಕೋಡಿ ಎಸ್. ಆನಂದ, ಡಾ. ಕೂಡಕಂಡಿ ದಯಾನಂದ, ಕುಸುಮಾಧರ ಎ.ಟಿ., ಡಾ. ವಿಶ್ವನಾಥ ಬದಿಕಾ‌ನ, ಪುರುಷೋತ್ತಮ ಕಿರ್ಲಾಯ, ಜಯಪ್ರಕಾಶ್ ಮೋಂಟಡ್ಕ ಬಿಳಿನೆಲೆ, ಡಾ. ಪುರುಷೋತ್ತಮ ಕೆ.ವಿ. ಕರಂಗಲ್ಲು, ಕಿರಣ್ ಕುಂಬಳಚೇರಿ, ಭರತೇಶ್ ಅಲಸಂಡೆಮಜಲು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

 

ಅರೆಭಾಷೆ ಸಾಕ್ಷ್ಯಚಿತ್ರ ಹಾಗೂ ಸಿ.ಡಿ. ಬಿಡುಗಡೆ – ಸ್ಪರ್ಧಾ ವಿಜೇತರುಗಳಿಗೆ ಬಹುಮಾನ ವಿತರಣೆ
ಈ ಸಂದರ್ಭದಲ್ಲಿ ಅರೆಭಾಷೆ ಡಿಜಿಟಲ್ ಪುಸ್ತಕಗಳನ್ನು ಹಾಗೂ ಅನಿಲ್ ಹೆಚ್.ಟಿ.ನಿರ್ದೇಶನ ಮಾಡಿದ ಕೊಡಗು ಗೌಡ ವಿದ್ಯಾಸಂಘ ಸಾಕ್ಷ್ಯಚಿತ್ರವನ್ನು ಸಚಿವ ಎಸ್. ಅಂಗಾರ ಅವರು ಬಿಡುಗಡೆಗೊಳಿಸಿದರು. ಪತ್ರಕರ್ತ ದುರ್ಗಾಕುಮಾರ್ ನಾಯರ್ ಕೆರೆ ಅವರು ನಿರ್ದೇಶಿಸಿದ ಎನ್.ಎಸ್. ದೇವಿಪ್ರಸಾದ್ ಸಂಪಾಜೆ ಅವರ ಕುರಿತಾಗಿರುವ ಸಾಕ್ಷ್ಯಚಿತ್ರವನ್ನು ಶಾಸಕ ಕೆ.ಜಿ. ಬೋಪಯ್ಯ ಬಿಡುಗಡೆಗೊಳಿಸಿ ಅಕಾಡೆಮಿಯ ವತಿಯಿಂದ ಕೊಡಮಾಡುವ ವಾದ್ಯ ಪರಿಕರಗಳನ್ನು ಹಂಚಿದರು. ಸುಳ್ಯದ ಭಾವನ ಸುಗಮ ಸಂಗೀತ ಬಳಗದ ಕೆ.ಆರ್. ಗೋಪಾಲಕೃಷ್ಣ ಅವರು ರಾಗ ಸಂಯೋಜನೆ ಮಾಡಿದ ಅರೆಭಾಷೆ ಹಾಡುಗಳಿಗೆ ರಾಗ ಸಂಯೋಜನೆ ಮಾಡಿದ ಸಿಡಿಯನ್ನು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಬಿಡುಗಡೆಗೊಳಿಸಿದರು. ಲೋಕೇಶ್ ಊರುಬೈಲು ನಿರ್ದೇಶನ ಮಾಡಿದ ಅರೆಭಾಷೆಯ ಕಥೆಗಳನ್ನು ವಿಧಾನಪರಿಷತ್ ಸದಸ್ಯೆ ಶ್ರೀಮತಿ ವೀಣಾ ಅಚ್ಚಯ್ಯ ಬಿಡುಗಡೆಗೊಳಿಸಿದರು. ಪೂಜಾರೀರ ಮಾದಪ್ಪ ಅವರು ನಿರ್ದೇಶನ ಮಾಡಿದ ಹರಿಸೇವೆ ಸಾಕ್ಷ್ಯಚಿತ್ರ ಮತ್ತು ಕಥೆಗಳ ಆಡಿಯೋವನ್ನು ವಿಧಾನಪರಿಷತ್ ಸದಸ್ಯ ಸುನಿಲ್ ಸುಬ್ರಮಣಿ ಬಿಡುಗಡೆಗೊಳಿಸಿದರು. ಅರೆಭಾಷೆ ಅಕಾಡೆಮಿಯ ವೆಬ್ ಸೈಟ್ ಗೆ ಕರ್ನಾಟಕ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಅರೆಭಾಷೆ ಅಕಾಡೆಮಿಯ ವತಿಯಿಂದ ಕಥೆ, ಕವಿತೆ, ಲಲಿತ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

 

*ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರೆ ಅಂಕಿತಾ ಸುರೇಶ್ ಅವರಿಗೆ ಸನ್ಮಾನ*
ಈ ಬಾರಿ ಜಪಾನ್ ನ ಟೋಕಿಯೋದಲ್ಲಿ ನಡೆದ ಒಲಿಂಪಿಕ್ ಕ್ರೀಡೆಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿದ್ದ ಭಾರತೀಯ ಮಹಿಳಾ ಹಾಕಿ ತಂಡದ ಸಹಾಯಕ ತರಬೇತುದಾರರಾಗಿದ್ದ ಶುಂಟಿಕೊಪ್ಪದ ಕಂಬಿಬಾಣೆಯ ಅಂಕಿತಾ ಸುರೇಶ್ ಅವರನ್ನು ಅರೆಭಾಷೆ ಅಕಾಡೆಮಿಯ ವತಿಯಿಂದ ಸನ್ಮಾನಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.