ಸ್ವಾತಂತ್ರ್ಯೋತ್ಸವದ ‍ಅಮೃತ ಮಹೋತ್ಸವದ ಪ್ರಯುಕ್ತ ಸುದ್ದಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ

Advt_Headding_Middle

 

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸುದ್ದಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಆ.  28 ರಂದು ಸುದ್ದಿ ಕಚೇರಿಯಲ್ಲಿ ನಡೆಯಿತು.


ಸುದ್ದಿ ಪತ್ರಿಕೆಯ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್ ರವರು ಅಧ್ಯಕ್ಷತೆ ವಹಿಸಿದ್ದರು. ಮಾಹಿತಿ ವಿಭಾಗದ ಮುಖ್ಯಸ್ಥ ಕೃಷ್ಣ ಬೆಟ್ಟ, ಕಛೇರಿ ವ್ಯವಸ್ಥಾಪಕ ಯಶ್ವಿತ್ ಕಾಳಂಮನೆ, ಬಹುಮಾನದ ಪ್ರಾಯೋಜಕರಾದ ಸಜ್ಜನ ಪ್ರತಿಷ್ಟಾನದ ನಿರ್ದೇಶಕ ರಹೀಂ ಬೀಜದಕಟ್ಟೆಯವರು ವೇದಿಕೆಯಲ್ಲಿದ್ದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ಬಹುಮಾನ ವಿಜೇತ ಮಕ್ಕಳ ಪೋಷಕರಾದ ಸೋಮಶೇಖರ್ ನೇರಳ, ಶೀನಪ್ಪ ಬಯಂಬು,ರೇಷ್ಮಾ ದೇವರಗುಂಡ ಮೊದಲಾದವರು ಅಭಿಪ್ರಾಯ ಹಂಚಿಕೊಂಡರು. 
1 ರಿಂದ 7ನೇ ತರಗತಿ ವಿದ್ಯಾರ್ಥಿಗಳಿಗೆ ನಡೆದ ಚಿತ್ರಕಲೆ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆದ ಪ್ರಬಂಧ ಸ್ಪರ್ಧೆ, ಪದವಿಪೂರ್ವ ವಿದ್ಯಾರ್ಥಿಗಳಿಗೆ ನಡೆದ ಭಾಷಣ ಸ್ಪರ್ಧೆ, ಪದವಿ ವಿದ್ಯಾರ್ಥಿಗಳಿಗೆ ನಡೆದ ಚರ್ಚಾ ಸ್ಪರ್ಧೆ ಹಾಗೂ ಸಾರ್ವಜನಿಕ ಭಾಷಣ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 

ಜಾಹೀರಾತು ವಿಭಾಗದ ಮುಖ್ಯಸ್ಥ ರಮೇಶ್ ನೀರಬಿದಿರೆ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶರೀಫ್ ಜಟ್ಟಿಪಳ್ಳ ವಂದಿಸಿದರು. ದಯಾಮಣಿ ಹೇಮಂತ್ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.