Breaking News

ಜನಮೆಚ್ಚಿದ ಅಧಿಕಾರಿ ಮತ್ತು ಸಿಬ್ಬಂದಿಗೆ ಸುದ್ದಿ ಬಳಗದಿಂದ ಗೌರವಾರ್ಪಣೆ

Advt_Headding_Middle

ತಾ.ಪಂ.ನೂತನ ಸಭಾಂಗಣದಲ್ಲಿ ಸಿಡಿಪಿಒ ಶ್ರೀಮತಿ ರಶ್ಮಿ ಮತ್ತು ಚಾಲಕ ಯೋಗೀಶ್ ಗೌಡರವರಿಗೆ ಸನ್ಮಾನ

ಸುದ್ದಿ ಸಮೂಹ ಸಂಸ್ಥೆಗಳ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ವಿವಿಧ ಇಲಾಖೆಗಳಲ್ಲಿ ಜನಮೆಚ್ಚಿದ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಗುರುತಿಸಿ ಕಾರ್ಯಕ್ರಮದಲ್ಲಿ ಸಿಡಿಪಿಒ ಇಲಾಖೆಯಿಂದ ಜನಮೆಚ್ಚಿದ ಅಧಿಕಾರಿಯಾಗಿ ಆಯ್ಕೆಯಾದ ಸಿಡಿಪಿಒ ಶ್ರೀಮತಿ ರಶ್ಮಿ ಅಶೋಕ್ ನೆಕ್ರಾಜೆ ಮತ್ತು ಸಿಬ್ಬಂದಿ ಯೋಗೀಶ್ ಗೌಡ ಎಂ.ರವರನ್ನು ಸುದ್ದಿ ಬಳಗದ ವತಿಯಿಂದ ತಾ.ಪಂ.ನ ನೂತನ ಸಭಾಂಗಣದಲ್ಲಿ ಇಂದು ಗೌರವಿಸಲಾಯಿತು.

ಸುದ್ದಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಯು.ಪಿ.ಶಿವಾನಂದರು ಇಬ್ಬರನ್ನೂ ಗೌರವಿಸಿದರು. ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ ಮುಖ್ಯ ಅತಿಥಿಯಾಗಿದ್ದರು.
ಸಿಡಿಪಿಒ ಶ್ರೀಮತಿ ರಶ್ಮಿ ನೆಕ್ರಾಜೆ ಮತ್ತು ಸಿಬ್ಬಂದಿ ಯೋಗೀಶ್ ಗೌಡ ಹಾಗು ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ಕಾರ್ಯದರ್ಶಿ ಜಯಂತಿ ರಾಜರಾಮ್ ಪುರ, ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಶ್ರೀಮತಿ ರಶ್ಮಿ ರಜನಿಕಾಂತ್ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಿಡಿಪಿಒ ಕಚೇರಿ ವತಿಯಿಂದ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಸಂಘದ ವತಿಯಿಂದ ಸಿಡಿಪಿಒ ಶ್ರೀಮತಿ ರಶ್ಮಿ ನೆಕ್ರಾಜೆ , ಚಾಲಕ ಯೋಗೀಶ್ ಗೌಡರನ್ನು, ಸುದ್ದಿ ಸಮೂಹ ಸಂಸ್ಥೆಗಳ ಮಾಲಕ ಡಾ.ಯು.ಪಿ.ಶಿವಾನಂದರು ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್‌ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮೇಲ್ವಿಚಾರಕಿ ಶೈಲಜಾ ಸ್ವಾಗತಿಸಿ, ಸುದ್ದಿ ಬಿಡುಗಡೆಯ ಪ್ರಧಾನ ವರದಿಗಾರ ಹರೀಶ್ ಬಂಟ್ವಾಳ್ ಪ್ರಾಸ್ತಾವಿಕ ಮಾತನಾಡಿದರು. ಕದಿಕಡ್ಕ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಗಿರಿಜಾರವರು ಪ್ರಾರ್ಥಿಸಿದರು. ಸುದ್ದಿ ವರದಿಗಾರ ಗಣೇಶ್ ಕುಕ್ಕುದಡಿ ವಂದಿಸಿದರು. ಸುದ್ದಿ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.