ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ : ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ

Advt_Headding_Middle

 

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ
ಪಿಯುಸಿ ಯಲ್ಲಿ 600 ಕ್ಕೆ 600 ಅಂಕ ಗಳಿಸಿದ ಗ್ರಾಮದ ವಿದ್ಯಾರ್ಥಿನಿಯರಿಗೆ ಸನ್ಮಾನ ಕಾರ್ಯಕ್ರಮವು ಸೆ.6 ರಂದು ಸಂಘದ ಸಭಾಭವನದಲ್ಲಿ ನಡೆಯಿತು.

ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನಾಟಿಕೇರಿ ವಸಂತ ಕುಮಾರ ಮತ್ತು ಮೀನಾಕ್ಷಿ ದಂಪತಿಗಳ ಪುತ್ರಿ ಅನನ್ಯ ಲಕ್ಷ್ಮಿ ಯವರಿಗೆ ಮತ್ತು ರವೀಂದ್ರ ಮಡ್ತಿಲ ಮತ್ತು ಶ್ರೀಮತಿ ತಿಲಕ ದಂಪತಿಗಳ ಪುತ್ರಿ ಶ್ರುತಿಯವರನ್ನು ಶಾಲು ಹೊದಿಸಿ,ಫಲ ಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಸಹಕಾರಿ ಸಂಘದ ಉಪಾಧ್ಯಕ್ಷ ವಿಕ್ರಂ ಪೈ, ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ,ಉಪಾಧ್ಯಕ್ಷೆ ಶ್ರೀಮತಿ ಸುಜಾತ ಪವಿತ್ರಮಜಲು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ಯಾಮ ಪ್ರಸಾದ್, ಗ್ರಾಮ ಲೆಕ್ಕಾಧಿಕಾರಿ ಕಾರ್ತಿಕ್ ಉಪಸ್ಥಿತರಿದ್ದು ಮಾತನಾಡಿದರು.

ಈ ಸಂದರ್ಭದಲ್ಲಿ ಸಹಕಾರಿ ನಿರ್ದೇಶಕರಾದ ಎಂ.ಸಿ.ಕುಸುಮಾಧರ, ಮಹೇಶ ಜೆ, ಸತೀಶ ಎಂ.ಕೆ, ದೇವಕಿ ಸಿ.ಜಿ, ಭವಾನಿ ಎಂ.ಸಿ, ಸರಸ್ವತಿ ಕೆ., ಕೃಷ್ಣ ಬೆಳ್ಚಪ್ಪಾಡ, ಪುರಂದರ ಎಸ್, ಚಂದ್ರಶೇಖರ ಎಸ್, ವಾಸುದೇವ ಬಿ.ಕೆ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ.ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.