ಗಾಂಧೀಜಿಯನ್ನು ಹತ್ಯೆ ನಡೆಸಿದ್ದು ನಾವೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ ಹಿಂದೂ ಮಹಾಸಭಾದ ನಾಯಕರ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಲು ಆಗ್ರಹ

Advt_Headding_Middle

 

ಸುಳ್ಯದಲ್ಲಿ ಎಸ್.ಡಿ.ಪಿ.ಐ. ಪ್ರತಿಭಟನೆ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ನಡೆಸಿದ್ದು ನಾವೇ ಎಂದು ಬಹಿರಂಗಪಡಿಸಿ ಸವಾಲೆಸೆದ ಹಿಂದೂ ಮಹಾಸಭಾದ ನಾಯಕರ ವಿರುದ್ಧ ದೇಶದ್ರೋಹದ ಕೇಸು ದಾಖಲಿಸಬೇಕು ಎಂದು ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ ಹೇಳಿದ್ದಾರೆ.

ಇಂದು ಸುಳ್ಯದಲ್ಲಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಅವರು ಮುಖ್ಯ ಭಾಷಣ ಮಾಡಿದರು.

ನಂಜನಗೂಡಿನಲ್ಲಿ ಬಿಜೆಪಿ ಸರಕಾರದ ಆದೇಶದಂತೆ ದೇವಸ್ಥಾನ ಕೆಡವಿದ ವಿಚಾರದಲ್ಲಿ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡುವ ಸಂದರ್ಭದಲ್ಲಿ ಹಿಂದೂ ಮಹಾಸಭಾ ನಾಯಕ ಧರ್ಮೇಂದ್ರ ಎಂಬವರು ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯವಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹತ್ಯೆಯನ್ನು ಸಮರ್ಥಿಸಿ ಆ ಹತ್ಯೆಯನ್ನು ನಾವೇ ಮಾಡಿದ್ದು ಎಂದು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಇನ್ನು ಕೂಡ ಈ ರೀತಿಯ ಕೃತ್ಯ ಮುಂದುವರಿಸುವುದಾಗಿ ಹೇಳಿಕೆ ನೀಡುತ್ತಿದ್ದಾರೆ ಅಂತವರನ್ನು ಬಂಧಿಸಿದರೆ ಸಾಲದು ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಇಕ್ಬಾಲ್ ಆಗ್ರಹಿಸಿದರು.

ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮಹಾತ್ಮ ಗಾಂಧೀಜಿಯವರ ತ್ಯಾಗ ನಮಗೆಲ್ಲರಿಗೂ ಗೊತ್ತಿದೆ. ಈ ದೇಶಕ್ಕಾಗಿ ಜೀವನವನ್ನು ಅವರು ಮುಡಿಪಾಗಿಟ್ಟಿದ್ದಾರೆ ಅಂತವರನ್ನು ಹತ್ಯೆ ಮಾಡಿದ್ದು ನಾವೇ ಎಂದು ಒಪ್ಪಿಕೊಳ್ಳುವ ವರನ್ನು ದೇಶದ್ರೋಹದ ಪ್ರಕರಣ ದಾಖಲಿಸಲೇಬೇಕು. ದೇಶದ ಅಭಿವೃದ್ಧಿಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಪ್ರಶ್ನಿಸಿದರೆ ಪ್ರಶ್ನಿಸಿದವರ ಮೇಲೆ ಕೇಸು ದಾಖಲಿಸುವ ಪೊಲೀಸ್ ಇಲಾಖೆ ಗಾಂಧಿ ಹತ್ಯೆಯ ಬಗ್ಗೆ ಹೇಳಿಕೆ ನೀಡಿದವರ ಮೇಲೆ ದೇಶದ್ರೋಹದ ಕೇಸು ಯಾಕೆ ಹಾಕುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾದ ಮಾಜಿ ಅಧ್ಯಕ್ಷ ಅಬ್ದುಲ್ ಕಲಾಂ, ಸುಳ್ಯ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ನಝೀರ್ ಸಿ.ಎ., ಸುಳ್ಯ ಬ್ಲಾಕ್ ಅಧ್ಯಕ್ಷ ಆಬೀದ್ ಪೈಚಾರ್, ಉಪಾಧ್ಯಕ್ಷ ಬಾಬು ಎನ್, ಸಿದ್ದೀಕ್ ಅಲೆಕ್ಕಾಡಿ, ನಗರ ಕಾರ್ಯದರ್ಶಿ ಮಿರಾಜ್, ಸಾಜಿದ್ ಗೂನಡ್ಕ, ಫಾರೂಕ್ ಕಾನಕ್ಕೋಡ್, ಹಮೀದ್ ಪೆರಾಜೆ, ಸಿದ್ದೀಕ್ ಕೋಡಿಯಮ್ಮೆ ಮತ್ತಿತರರಿದ್ದರು.

ಎಸ್.ಡಿ.ಪಿ.ಐ. ಸುಳ್ಯ ವಿಧಾನಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ರಫೀಕ್ ಎಂ.ಎ. ಘೋಷಣೆ ಕೂಗಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.