ಜಾಲ್ಸೂರು: ರಾಷ್ಟ್ರೀಯ ಆಹಾರ ಸಪ್ತಾಹ ಮತ್ತು ಪೋಷಣ್ ಅಭಿಯಾನ ಮಾಸಾಚರಣೆ- ಸನ್ಮಾನ

Advt_Headding_Middle

ಜಾಲ್ಸೂರು ವರಲಕ್ಷ್ಮೀ ಸ್ತ್ರೀಶಕ್ತಿ ಗೊಂಚಲು ಸಮಿತಿ ಮತ್ತು ಜಾಲ್ಸೂರು ಗ್ರಾಮದ ಅಂಗನವಾಡಿ ಕೇಂದ್ರಗಳ ಸಹಕಾರದಲ್ಲಿ ರಾಷ್ಟ್ರೀಯ ಪೌಷ್ಟಿಕ ಆಹಾರ ಸಪ್ತಾಹ ಮತ್ತು ಪೋಷಣ್ ಅಭಿಯಾನ ಮಾಸಾಚರಣೆ ಕಾರ್ಯಕ್ರಮವು ಜಾಲ್ಸೂರು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಸೆ.22ರಂದು ಜರುಗಿತು.
ಗ್ರಾ.ಪಂ‌. ಅಧ್ಯಕ್ಷ ಕೆ.ಯಂ. ಬಾಬು ಕದಿಕಡ್ಕ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ಕೆ.ಎಂ. ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಪೋಷಣ್ ಅಭಿಯಾನ ಕಾರ್ಯಕ್ರಮದ ಕುರಿತು ಮಾತನಾಡಿದರು.
ಬೆಳ್ಳಾರೆ ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ ಪ್ರಸಾದ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಜಾಲ್ಸೂರು ಗ್ರಾ.ಪಂ. ಉಪಾಧ್ಯಕ್ಷೆ ಶ್ರೀಮತಿ ಲೀಲಾವತಿ ವಿನೋಬನಗರ, ಗ್ರಾ.ಪಂ. ಸದಸ್ಯರುಗಳಾದ ಶಿವಪ್ರಸಾದ್ ಕುಕ್ಕಂದೂರು, ಶ್ರೀಮತಿ ಸಂಧ್ಯಾ ವಾಗ್ಲೆ, ಸ್ತ್ರೀಶಕ್ತಿ ಗೊಂಚಲು ಸಮಿತಿ ಅಧ್ಯಕ್ಷೆ ಶ್ರೀಮತಿ ತಿರುಮಲೇಶ್ವರಿ ಮರಸಂಕ, ಶ್ರೀಮತಿ ಗೀತಾ ಗೋಪಿನಾಥ್ ಬೊಳುಬೈಲು, ಬ್ಲಾಕ್ ಸೊಸೈಟಿ ಉಪಾಧ್ಯಕ್ಷೆ ಶ್ರೀಮತಿ ವೇದಾ ಶೆಟ್ಟಿ, ತೋಟಗಾರಿಕೆ ಇಲಾಖೆಯ ತಾಂತ್ರಿಕ ಸಹಾಯಕಿ ಕು.ಆಕಾಂಕ್ಷ , ಸೀತು ಕಲ್ಲಮುರ, ಪೋಷಣ್ ಅಭಿಯಾನದ ಸಂಯೋಜಕಿ ಕು. ಪ್ರಮೀಳ ಎಂ.ಎಸ್.,ಕು. ಶೋಭಿತಾ ಕೆ.ಸಿ. ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ಸಮೂಹ ಮಾಧ್ಯಮ ಸಂಸ್ಥೆಗಳ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಅಂಗವಾಗಿ ನಡೆಸಿದ ಜನಮೆಚ್ಚಿದ ಅಧಿಕಾರಿಯಾಗಿ ಆಯ್ಕೆಯಾದ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀಮತಿ ರಶ್ಮಿ ನೆಕ್ರಾಜೆ ಮತ್ತು ಚಾಲಕ ಯೋಗೀಶ್ ಅವರನ್ನು ಅಭಿನಂದಿಸಲಾಯಿತು.
ಸೋಣಂಗೇರಿ ಅಂಗನವಾಡಿ ಕೇಂದ್ರದ ನಿವೃತ್ತ ಸಹಾಯಕಿ ಶ್ರೀಮತಿ ಲೀಲಾವತಿ ಅವರನ್ನು ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಜಾಲ್ಸೂರು ಗ್ರಾಮದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರುಗಳು, ಅಂಗನವಾಡಿ ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪೌಷ್ಟಿಕ ಆಹಾರ ತಂದಂತಹ ಎಲ್ಲರಿಗೂ ಗೊಂಚಲಿನ ವತಿಯಿಂದ ಬಹುಮಾನ ವಿತರಿಸಲಾಯಿತು.
ಅಂಗನವಾಡಿ ಕಾರ್ಯಕರ್ತೆಯರುಗಳಾದ ಪ್ರೇಮಲತಾ ಎನ್. ಪ್ರಾರ್ಥಿಸಿ, ಶ್ರೀಮತಿ ಗಿರಿಜ ಕದಿಕಡ್ಕ ಸ್ವಾಗತಿಸಿದರು. ಬೇಬಿ ಕುಮಾರಿ ಬೊಳುಬೈಲು ವಂದಿಸಿದರು. ಶ್ರೀಮತಿ ನಿವೇದಿತಾ ಕೋನಡ್ಕಪದವು ಕಾರ್ಯಕ್ರಮ ನಿರೂಪಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.