ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ

Advt_Headding_Middle

ಸೆ.27 ರ ಬಿ.ಸಿ. ರೋಡ್ ಪ್ರತಿಭಟನೆಗೆ ಸುಳ್ಯದಿಂದಲೂ ರೈತರು ಭಾಗಿಯಾಗಲು ನಿರ್ಧಾರ

ಕೃಷಿ ಮಸೂದೆಗಳ ಹಿಂಪಡೆಯಲು ಆಗ್ರಹಿಸಿ ರೈತ – ದಲಿತ – ಕಾರ್ಮಿಕ – ಜನಪರ ಚಳುವಳಿಗಳ ಒಕ್ಕೂಟ ದಕ್ಷಿಣ ಕನ್ನಡ ಇದರ ಆಶ್ರಯದಲ್ಲಿ ಸೆ.೨೭ರಂದು ಭಾರತ್ ಬಂದ್ ಬೆಂಬಲಿಸಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರತಿಭಟನಾ ಸಭೆ ಬಿ.ಸಿ. ರೋಡು ನಲ್ಲಿ ನಡೆಯಲಿದ್ದು ಸುಳ್ಯದಿಂದಲೂ ರೈತರು ಭಾಗವಹಿಸಲಿದ್ದಾರೆಂದು ಸುಳ್ಯ ತಾಲೂಕು ರೈತ ಸಂಘದ ಅಧ್ಯಕ್ಷ ಲೋಲಜಾಕ್ಷ ಭೂತಕಲ್ಲು ಹೇಳಿದ್ದಾರೆ.
ಇಂದು ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಸರಕಾರ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಕೃಷಿ ಉತ್ಪನ್ನಗಳಿಗೆ ಕನಿಷ್ಟ ಬೆಂಬಲ ಬೆಲೆಯಲ್ಲಿ ಕಾನೂನಾತ್ಮಕಗೊಳಿಸಲು ಆಗ್ರಹಿಸಿ ದೆಹಲಿಯ ಹೊರ ವಲಯದಲ್ಲಿ ನಡೆಯುತ್ತಿರುವ ನಿರಂತರ ಚಳಬವಳಿಯನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿ ಬಂದ್ ಹಾಗೂ ಸಂಯುಕ್ತ ಹೋರಾಟ ಕರ್ನಾಟಕವನ್ನು ನಾವು ಬೆಂಬಲಿಸುತ್ತೇವೆ. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆಯನ್ನು ಕಾನೂನಾತ್ಮಕಗೊಳಿಸಲು ನಮ್ಮ ಬೇಡಿಕೆಯಿದೆ. ಕಾರ್ಮಿಕ ಮಸೂದೆಯನ್ನು ಹಿಂಪಡೆಯಬೇಕು. ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಸರಿಯಲ್ಲ. ಡಿಸಿ ಮನ್ನಾ ಜಮೀನು ಅರ್ಹ ಫಲಾನುಭವಿಗಳಿಗೆ ಇನ್ನೂ ಕೈ ಸೇರಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್‌ನ ಬೆಲೆ ಯೇರಿಕೆಯನ್ನು ನಿರಂತರ ಏರುತ್ತಿದೆ ಎಂದು ಅವರು ಹೇಳಿದರು.
ಸುಳ್ಯದಿಂದ ಈಗಾಗಲೇ ೭೫ ಮಂದಿ ರೈತರು ಭಾಗವಹಿಸಲು ಒಪ್ಪಿಕೊಂಡಿದ್ದಾರೆ. ಇನ್ನೂ ಬರುವವರು ಇದ್ದಾರೆ ಎಂದು ಅವರು ಹೇಳಿದರು.
ಗೌರವಾಧ್ಯಕ್ಷ ನೂಜಾಲು ಪದ್ಮನಾಭ ಗೌಡ ಮಾತನಾಡಿ, “ರೈತರು ೧೦ ತಿಂಗಳಿನಿಂದ ದೆಹಲಿಯಲ್ಲಿ ಹಕ್ಕಿಗಾಗಿ ಹೋರಾಟ ಮಾಡುತ್ತಿದ್ದಾರೆ. ಆದರೆ ಅವರ ಹೋರಾಟಕ್ಕೆ ಫಲ ಸಿಕ್ಕಿಲ್ಲ. ೨೦೨೦ರಲ್ಲಿ ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದು ಹೇಳಿರುವ ನರೇಂದ್ರ ಮೋದಿ ಸರಕಾರ ರೈತರ ಆದಾಯಕ್ಕೆ ಕೊಕ್ಕೆ ಹಾಕುತ್ತಿದೆ. ರೈತ ವಿರೋಧಿ ಕಾನೂನು ತಂದು ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ” ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಕಾರ್ಯದರ್ಶಿ ಭರತ್, ಪ್ರಮುಖರಾದ ಶಿವರಾಮ ನಾರ್ಕೋಡು, ಸುಳ್ಯಕೋಡಿ ಮಾಧವ ಗೌಡ, ಮಂಜುನಾಥ ಮಡ್ತಿಲ ಇದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.