ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದ ಸುಳ್ಯ ನ್ಯಾಯಾಲಯ

Advt_Headding_Middle

 

2015 ಡಿಸೆಂಬರ್ 31 ರ ಪ್ರಕರಣ ಒಂದರಲ್ಲಿ ಸುಳ್ಯ ಜೂನಿಯರ್ ಕಾಲೇಜ್ ಸಮೀಪ ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಪ್ರಕರಣ ದಾಖಲಾಗಿ ಆರೋಪಿಗಳಾದ ಕೂಸಪ್ಪ ಮತ್ತು ಅಶೋಕ ಎಂಬುವವರು ಕಳೆದ ಒಂದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸುಳ್ಯ ನ್ಯಾಯಾಧೀಶರು ಆರೋಪಿಗಳಿಗೆ ಬಂಧನದ ವಾರಂಟನ್ನು ಜಾರಿಮಾಡಲು ಆದೇಶಿಸಿದ್ದರು. ಅದರ ಪ್ರಕಾರ ಆರೋಪಿಗಳನ್ನು ಬಂಧಿಸಿ ಸುಳ್ಯ ನ್ಯಾಯಾಲಯದ ಮುಂದೆ ಆರೋಪಿಗಳನ್ನು ಪೊಲೀಸರು ಹಾಜರು ಪಡಿಸಿದಾಗ ಸುಳ್ಯ ನ್ಯಾಯಾಲಯದ ಎಪಿಪಿ ಜನಾರ್ಧನ್ ವಾದಿಸಿ ಮಾನ್ಯ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ನೀಡಬಾರದು. ಜಾಮೀನು ಮುಚ್ಚಳಿಕೆಯಲ್ಲಿ ನಿರೂಪಿಸಿದ ಷರತ್ತುಗಳನ್ನು ಅವರು ಉಲ್ಲಂಘಿಸಿದ್ದಾರೆ. ಹಾಗೂ ಇದರಿಂದ ಅಭಿಯೋಜನಾ ಪ್ರಕರಣಕ್ಕೆ ತೀವ್ರ ಅಡಚಣೆಯಾಗಿರುತ್ತದೆ. ಮತ್ತೆ ಇವರನ್ನು ಜಾಮೀನಿನಲ್ಲಿ ಬಿಡುಗಡೆಗೊಳಿಸಿದಲ್ಲಿ ಇವರು ತಲೆಮರೆಸಿಕೊಳ್ಳುವ ಎಲ್ಲಾ ಸಾಧ್ಯತೆ ಇದ್ದು, ಜಾಮೀನು ನೀಡಬಾರದು ಎಂದು ವಿನಂತಿಸಿಕೊಂಡರು. ವಾದವನ್ನು ಪುರಸ್ಕರಿಸಿದ ನ್ಯಾಯಾಲಯದ ಹಿರಿಯ ನ್ಯಾಯಾಧೀಶ ಸೋಮಶೇಖರ್ ಅವರು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಮಂಗಳೂರಿನ ಕಾರಾಗೃಹಕ್ಕೆ ರಿಮಾಂಡ್ ಮಾಡಿ ಆದೇಶ ನೀಡಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.