ಶಾಂತಿನಗರ ಅಂಗನವಾಡಿಯಲ್ಲಿ ಪೋಷಣ್ ಅಭಿಯಾನ ಹಾಗೂ ಪೌಷ್ಠಿಕ ಆಹಾರ ಸಪ್ತಾಹ

Advt_Headding_Middle

 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಅಂಗನವಾಡಿ ಕೇಂದ್ರ ಹಾಗೂ ದೀಪಾಂಜಲಿ ಮಹಿಳಾ ಮಂಡಲ ಶಾಂತಿನಗರ ಇವುಗಳ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣ್ ಅಭಿಯಾನ ಹಾಗೂ ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮವು ಶಾಂತಿನಗರ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು ಶ್ರೀಮತಿ ಹೇಮಲತಾ ದೇಂಗೋಡಿ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ನಗರ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಬುದ್ಧ ನಾಯ್ಕರವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಶಾಂತಿನಗರ ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ತುಳಸಿ ಕೆ. ಉಪಸ್ಥಿತರಿದ್ದರು.
ವೇದಿಕೆಯಲ್ಲಿ ಅಂಗನವಾಡಿ ಬಾಲವಿಕಾಸ ಸಮಿತಿ ಅಧ್ಯಕ್ಷೆ ಶ್ರೀಮತಿ ದೇವಕಿ, ಶಾಂತಿನಗರ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿಯರಾದ ಶ್ರೀಮತಿ ವಸಂತಿ, ಶ್ರೀಮತಿ ಹೇಮಲತಾ ಉಪಸ್ಥಿತರಿದ್ದರು. ಮಹಿಳೆಯರಿಗೆ ಪೌಷ್ಟಿಕ ಆಹಾರವಾದ ಮೊಳಕೆ ಬರಿಸಿದ ನವಧಾನ್ಯಗಳು ಸೊಪ್ಪು ತರಕಾರಿಗಳಿಂದ ತಯಾರಿಸಿದ ಸುಮಾರು 25 ತರಹದ ಆಹಾರ ತಯಾರಿಸಿ, ಸ್ಪರ್ಧೆ ನಡೆಸಿ ದೀಪಾಂಜಲಿ ಮಹಿಳಾ ಮಂಡಲದ ವತಿಯಿಂದ ಬಹುಮಾನ ವಿತರಿಸಲಾಯಿತು. ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಇಂದಿರಾ ಮಂಚಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಹರ್ಷ ಕರುಣಾಕರ ಸೇರ್ಕಜೆ ವಂದಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.