ಪೇರಡ್ಕ ಮಸೀದಿ ಪುನರ್ ನಿರ್ಮಾಣ ಸಮಿತಿ ಅಧ್ಯಕ್ಷರಾಗಿ ಟಿ.ಎಂ. ಶಹೀದ್ ತೆಕ್ಕಿಲ್ ಆಯ್ಕೆ

Advt_Headding_Middle

 

ಇತಿಹಾಸ ಪ್ರಸಿದ್ಧ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೇರಡ್ಕ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ನೂತನ ಹೌಳ್ ನಿರ್ಮಾಣಕ್ಕಾಗಿ ಪುನರ್ ನೀರ್ಮಾಣ ಸಮಿತಿಯನ್ನು ಇತ್ತೀಚೆಗೆ ರಚಿಸಲಾಯಿತು. ಅಧ್ಯಕ್ಷರಾಗಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ ಎಂ ಶಹೀದ್ ತೆಕ್ಕಿಲ್ ಸರ್ವಾನುಮತದಿಂದ ಆಯ್ಕೆಯಾದರು.
ಈ ಹಿಂದೆ ಪೇರಡ್ಕ ಮಸೀದಿಯನ್ನು ಸುಮಾರು 40ರ ದಶಕದಲ್ಲಿ ತೆಕ್ಕಿಲ್ ಮೊಹಮ್ಮದ್ ಹಾಜಿಯವರ ನೇತೃತ್ವದಲ್ಲಿ ಪುನರ್ ನಿರ್ಮಿಸಲಾಯಿತು. ನಂತರ 70 ರ ದಶಕದಲ್ಲಿ ಮಾಜಿ ಅಧ್ಯಕ್ಷರಾದ ಟಿ ಎಂ ಬಾಬಾ ಹಾಜಿ ತೆಕ್ಕಿಲ್ ರವರ ಅಧ್ಯಕ್ಷತೆಯಲ್ಲಿ ನವೀಕರಿಸಲಾಯಿತು. ಇದೀಗ ತೆಕ್ಕಿಲ್ ಕುಟುಂಬದ ಮೂರನೇ ತಲೆಮಾರಿನ ಟಿ ಎಂ ಶಹೀದ್ ತೆಕ್ಕಿಲ್ ರವರ ನೇತೃತ್ವದಲ್ಲಿ ಮಸೀದಿಯ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಪೇರಡ್ಕ ಜುಮಾ ಮಸೀದಿಯ ಗೌರವಾಧ್ಯಕ್ಷರಾಗಿರುವ ಇವರು ಪೇರಡ್ಕ ಮಸೀದಿಯನ್ನು ಸಂಪರ್ಕಿಸುವ ಸೇತುವೆ ಮತ್ತು ರಸ್ತೆ ನಿರ್ಮಾಣಕ್ಕೆ, ಪೇರಡ್ಕ ಮಸೀದಿ, ದರ್ಗಾ, ಮದರಸ ಕಟ್ಟಡಗಳ ಅಭಿವೃದ್ಧಿಗೆ ಶ್ರಮಿಸಿದವರು. ಕರ್ನಾಟಕ ಸರಕಾರದ ವಕ್ಫ್ ಇಲಾಖೆ, ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ಕೋಟಿಗಟ್ಟಲೆ ಅನುದಾನವನ್ನು ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು. ಅರಂತೋಡು ಬದ್ರಿಯಾ ಜುಮಾ ಮಸೀದಿಯ ಪುನರ್ ನೀರ್ಮಾಣ ಸಮಿತಿಯ ಅಧ್ಯಕ್ಷರಾಗಿ ಮಸೀದಿಯ ಪುನರ್ ನಿರ್ಮಾಣಕ್ಕೆ ಹಾಗೂ ಮದರಸದ ಅಭಿವೃದ್ಧಿಗೆ ಶ್ರಮಿಸಿದವರು. ಅರಂತೋಡು ಅನ್ವಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೇಶನ್ ( ರಿ ) ಇದರ ಗೌರವಾಧ್ಯಕ್ಷರಾಗಿ ಅನ್ವಾರುಲ್ ಹುದಾ ಶಾದಿಮಹಲ್ ಕಟ್ಟಡಕ್ಕೆ ಅನುದಾನ ಒದಗಿಸಿಕೊಟ್ಟಿರುತ್ತಾರೆ. ಮರ್ ಹೂಮ್ ಡಾ। ಶಾಹ್ ಮುಸ್ಲಿಯಾರ್ ಮನೆ ನೀರ್ಮಾಣ ಸಮಿತಿಯ ಅಧ್ಯಕ್ಷರಾಗಿ ಪ್ರಸ್ತುತ ಅರಂತೋಡು ಮಸೀದಿಯ ಉಸ್ತಾದ್ ಇಸ್ಹಾಖ್ ಬಾಖವಿಯವರ ಮನೆ ನೀರ್ಮಾಣ ಸಮಿತಿಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ಬೆಳ್ಳಿ ಹಬ್ಬ ಆಚರಣಾ ಸಮಿತಿಯ ಅಧ್ಯಕ್ಷರಾಗಿ, ಸುಳ್ಯದ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆಯ ದಶಮನೋತ್ಸವ ಸಮಿತಿಯ ಅಧ್ಯಕ್ಷರಾಗಿ ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದರು. ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ  ಅರಂತೋಡು ಇದರ ಸ್ಥಾಪಕಾಧ್ಯಕ್ಷರಾಗಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಧಾರ್ಮಿಕ, ಸಹಕಾರಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ತಮ್ಮನ್ನು ತಾವೆ ತೊಡಗಿಸಿಕೊಂಡು ಬಂದಿರುವ ಇವರು ಗೂನಡ್ಕದಲ್ಲಿ ತೆಕ್ಕಿಲ್ ಸಮೂಹ ಶಿಕ್ಷಣ ಸಂಸ್ಥೆಯನ್ನು ಮುನ್ನಡೆಸುತ್ತಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.