ಸೆ.30 : ಸುಳ್ಯದ ಸೈಂಟ್ ಜೋಸೆಫ್ ಶಾಲಾ ಶಿಕ್ಷಕಿ ಶ್ರೀಮತಿ ಶೀಲಾ‌ ಪಿ.ನಿವೃತ್ತಿ

Advt_Headding_Middle

 

ಸುಳ್ಯದ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಶ್ರೀಮತಿ ಶೀಲಾ ಪಿ.ಯವರು ಸೆ.30 ರಂದು ನಿವೃತ್ತಿಗೊಳ್ಳಲಿದ್ದಾರೆ.

ಸುದೀರ್ಘ 29 ವರ್ಷಗಳ ಕಾಲ ಹಲವು ಶಾಲೆಗಳಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ ಇವರು ಪ್ರಾರಂಭದಲ್ಲಿ ಬೆಂಗಳೂರಿನ ದಾಸರಹಳ್ಳಿಯ ಸ್ಟಾಂಡರ್ಡ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 2 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಂತರ ಬಸವೇಶ್ವರ ನಗರದ ಫ್ಲೋರೆನ್ಸ್ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ 6 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ.

ಬಳಿಕ 2000 ಇಸವಿಯಲ್ಲಿ ಸುಳ್ಯ ರೋಟರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆಗೆ ಸೇರಿದ ಇವರು ಅಲ್ಲಿ 2 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.
ಬಳಿಕ 2002 ರಲ್ಲಿ ಸೈಂಟ್ ಜೋಸೆಫ್ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ ಇವರು ಅಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಒಟ್ಟು 19 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದರು.

ಇವರು ಸುಳ್ಯದ ಶ್ರೀ ಹರಿ ಕಾಂಪ್ಲೆಕ್ಸ್ ನಲ್ಲಿರುವ ಶ್ಯಾಮ್ ಡಯಗ್ನಾಸ್ಟಿಕ್ ಲ್ಯಾಬ್ ಮಾಲಕರಾದ ಶ್ಯಾಮ್ ಭಟ್ ಇವರ ಪತ್ನಿ.
ಇವರ ಪುತ್ರಿ ಸ್ನೇಹರವರು ಮುಡಿಪುವಿನಲ್ಲಿ ಇನ್ಫೋಸಿಸ್ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದಾರೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.