ಗೋವಿಂದನಗರ : ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ

Advt_Headding_Middle

 

 

ಕೊಲ್ಲಮೊಗ್ರ ಗ್ರಾಮದ ಕಟ್ಟ  ಗೋವಿಂದನಗರ ಅಂಗನವಾಡಿ ಕೇಂದ್ರದಲ್ಲಿ ಸೆ.20 ರಂದು ಪೋಷಣ್ ಮಾಸಾಚರಣೆ ಪ್ರಯುಕ್ತ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ ಕಾರ್ಯಕ್ರಮ ನಡೆಯಿತು.
ಬಾಲವಿಕಾಸ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಶ್ರೀಮತಿ ದುರ್ಗಾಲಕ್ಷ್ಮಿ ನಿಶಾಂತ್ ಕಟ್ಟ ಅವರು ಸಮತೋಲನ ಆಹಾರ ಹಾಗೂ ದೈಹಿಕ, ಬೌದ್ಧಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕಾಂಶಗಳನ್ನು ಯಾವ ರೀತಿ ಪಡೆದುಕೊಳ್ಳಬಹುದು ಎಂದು ಮಾಹಿತಿ ನೀಡಿದರು.
ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಂರಕ್ಷಣಾಧಿಕಾರಿ ಶ್ರೀಮತಿ ಚಂದ್ರಾವತಿ ಅವರು ಮಕ್ಕಳಿಗೆ ನೀಡುವ ಚುಚ್ಚುಮದ್ದು, ಜಂತುಹುಳು ನಿವಾರಣಾ ಮಾತ್ರೆ ಹಾಗೂ ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಕೊಲ್ಲಮೊಗ್ರು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ಮೋಹಿನಿ ಕಟ್ಟ ಹಾಗೂ ಆಶಾ ಕಾರ್ಯಕರ್ತೆಯಾದ ಶ್ರೀಮತಿ ಶೇಷಮ್ಮ ಉಪಸ್ಥಿತರಿದ್ದರು.
ಪುಷ್ಪಾವತಿ ಕೆ.ಹೆಚ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ  ಮಾಡಿದರು. ಮಕ್ಕಳ ತಾಯಂದಿರು ಸ್ಥಳಿಯವಾಗಿ ಸಿಗುವ ಸೊಪ್ಪು-ತರಕಾರಿಗಳಿಂದ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಪ್ರಾತ್ಯಕ್ಷಿಕೆಗೆ ಇಟ್ಟರು. ಆಂಗನವಾಡಿ ಸಹಾಯಕಿ ಸಹಕರಿಸಿದರು.

 

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.