ಜಿಲ್ಲಾ ಹಾಗೂ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ

Advt_Headding_Middle

 

ಕೃಷಿ ಇಲಾಖೆಯ ಆತ್ಮ ಯೋಜನೆಯಡಿ ೨೦೨೧-೨೨ನೇ ಸಾಲಿನ ಜಿಲ್ಲೆ ಹಾಗೂ ತಾಲೂಕು ಮಟ್ಟದ ಆತ್ಮ ಯೋಜನೆಯ ಶ್ರೇಷ್ಠ ಕೃಷಿಕ ಪ್ರಶಸ್ತಿಗಾಗಿ ಆಸಕ್ತ ಆರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕೃಷಿಯಲ್ಲಿ ಸಮಗ್ರ ಕೃಷಿ ಪದ್ದತಿ, ಸಮಗ್ರ ನೀರು ನಿರ್ವಹಣೆ, ಸಾವಯವ ಕೃಷಿ ಅಭಿವೃದ್ಧಿ, ವೈಜ್ಞಾನಿಕ ಯಂತ್ರೋಪಕರಣಗಳ ಬಳಕೆ, ತೋಟಗಾರಿಕೆ, ಹೈನುಗಾರಿಕೆ, ಕೋಳಿ ಸಾಕಾಣಿಕೆ, ಮೀನುಗಾರಿಕೆ, ರೇಷ್ಮೆ ಬೇಸಾಯ, ಹೈಟೇಕ್ ತಂತ್ರಜ್ಞಾನ ಅಳವಡಿಕೆ (ಹಸಿರು ಮನೆ, ಅಭಿವೃದ್ಧಿ, ಸಸ್ಯಕಾಶಿ, ಕೃಷಿ ಯಾಂತ್ರೀಕರಣ ಇತ್ಯಾದಿ) ಕೃಷಿ ಸಂಸ್ಕರಣೆ, ಅರಣ್ಯ ಕೃಷಿ, ಆಡು ಕುರಿ, ಮೊಲ ಇತ್ಯಾದಿ ಸಾಕಾಣಿಕೆಗಳಲ್ಲಿ ಯಾವುದಾದರೂ ಒಂದನ್ನು ಮಾತ್ರ ಅರ್ಜಿ ಸಲ್ಲಿಸತಕ್ಕದ್ದು.

ಅರ್ಜಿಯೊಂದಿಗೆ ಸಂಬಂಧಪಟ್ಟ ಚಟುವಟಿಕೆಯ ಜೆರಾಕ್ಸ್ ಪ್ರತಿಗಳನ್ನು, ಫೋಟೋಗ್ರಾಫ್‌ಗಳನ್ನು, ಸಿ.ಡಿ.ಗಳನ್ನು, ಖರ್ಚು ವೆಚ್ಚಗಳು, ವರಮಾನ, ಪತ್ರಿಕಾ ಪ್ರಕಟಣೆಗಳ ಮಾಹಿತಿ ಇತ್ಯಾದಿಗಳ ಪ್ರತಿ ಲಗತ್ತಿಸಬೇಕು.
ಆಳವಡಿಸಿರುವ ತಾಂತ್ರಿಕತೆ ಪ್ರಸ್ತುತ ಸನ್ನಿವೇಶಕ್ಕೆ ಮತ್ತು ರೈತ ಸಮುದಾಯಕ್ಕೆ ಪ್ರೇರಣೆಗೆ ಮತ್ತು ಅಳವಡಿಕೆ ಸಹಕಾರಿಯಾಗುವಂತಿರಬೇಕು.

ಕಳೆದೆರಡು ಸಾಲಿನಲ್ಲಿ ತಾಲೂಕು ಅಥವಾ ಜಿಲ್ಲಾಮಟ್ಟದ ಪ್ರಶಸ್ತಿಗಳನ್ನು ಪಡೆದಿದ್ದವರು ಮುಂದಿನ ಹಂತದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಬಹುದು. ಆದರೆ ಒಂದ ಬಾರಿ ರಾಜ್ಯಮಟ್ಟದ ಶ್ರೇಷ್ಠ ಕೃಷಿಕ/ಕೃಷಿ ಪಂಡಿತ ಪ್ರಶಸ್ತಿ ಪಡೆದಿದ್ದಲ್ಲಿ ಪುನಃ ಯಾವುದೇ ತರನಾದ ಪ್ರಶಸ್ತಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಿಂದ ಪಡೆಯಬಹುದು. ಭರ್ತಿ ಅರ್ಜಿಯನ್ನು ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಸಲ್ಲಿಸಲು ಅ.೧೬ ಕೊನೆಯ ದಿನಾಂಕವಾಗಿರುತ್ತದೆ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.