ಸುಬ್ರಹ್ಮಣ್ಯ ಎಸ್ ಎಸ್ ಪಿ ಯು ಕಾಲೇಜಿನ ಪ್ರಾಂಶುಪಾಲರಾಗಿ ಸೋಮಶೇಖರ ನಾಯಕ್

Advt_Headding_Middle

 

 

ಸುಬ್ರಹ್ಮಣ್ಯದ ಶ್ರೀ ಸುಬ್ರಹ್ಮಣ್ಯೇಶ್ವರ ಪಿ ಯು ಕಾಲೇಜಿನ ಪ್ರಾಂಶುಪಾಲರಾಗಿ ಸೋಮಶೇಖರ ನಾಯಕ್ ಸೆ.30 ರಂದು ಅಧಿಕಾರ ಸ್ವೀಕರಿಸಿದ್ದಾರೆ.

ಪ್ರಾಂಶುಪಾಲರಾಗಿದ್ದ ಶ್ರೀಮತಿ ಸಾವಿತ್ರಿ ಕೆ ಅವರು ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಮ್ ಸುಳ್ಳಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಶೋಭಾ ಗಿರಿಧರ್, ವನಜಾ ಭಟ್, ಪೂರ್ವ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಾಜೇಶ್ ಎನ್ ಎಸ್, ಲೊಕೇಶ್ ಬಿ ಎನ್, ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸೋಮಶೇಖರ ನಾಯಕ್ ಅವರು ಎಸ್ ಎಸ್ ಪಿ ಯು ಕಾಲೇಜಿಗೆ 2003 ರಲ್ಲಿ ಇಂಗ್ಲೀಷ್ ಭಾಷಾ ಉಪನ್ಯಾಸಕರಾಗಿ ಸೇವೆ ಸೇರಿದ್ದಾರೆ. ಇವರು ರಾಜ್ಯ ಪಿ.ಯು ಕಾಲೇಜುಗಳ ಉಪನ್ಯಾಸಕ ಸಂಘದ ದ.ಕ ಜಿಲ್ಲಾ ಘಟಕದ ಅಧ್ಯಕ್ಷರಾಗಿದ್ದಾರೆ. ರಾಜ್ಯ ಉಪನ್ಯಾಸ ಸಂಘದ ಸಂಘಟನಾ ಕಾರ್ಯದರ್ಶಿಯಾಗಿ, ಪಿ ಯು ಇಲಾಖೆಯಿಂದ ಆಂಗ್ಲ ಭಾಷಾ ಸಂಪನ್ಮೂಲ ವ್ಯಕ್ತಿಯಾಗಿ, ಎರಡು ಭಾರಿ ದ ಕ ಜಿಲ್ಲಾ ಆಂಗ್ಲ ಭಾಷಾ ಉಪನ್ಯಾಸಕ ಕಾರ್ಯಗಾರದ ಕೋ ಆರ್ಡಿನೇಟರ್ ಆಗಿ ಕೆಲಸ ಮಾಡಿರುತ್ತಾರೆ. ಇವರ ಪತ್ನಿ ಇದೇ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ರೇಖಾರಾಣಿ. ಮಗಳು ತಪಸ್ಯ ಎಸ್. ನಾಯಕ್ ಕುಮಾರಸ್ವಾಮಿ ವಿದ್ಯಾಲಯದಲ್ಲಿ 8 ನೇ ತರಗತಿಯ ವಿದ್ಯಾರ್ಥಿನಿ.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.