ಸುಳ್ಯ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ ಸಮಾರೋಪ ಸಮಾರಂಭ

Advt_Headding_Middle

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಸುಳ್ಯ, ಸುಳ್ಯ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ ಪೋಷಣ್ ಮಾಸಾಚರಣೆ ೨೦೨೧ರ ಸಮಾರೋಪ ಸಮಾರಂಭ ಸೆ.೩೦ ರಂದು ಸುಳ್ಯ ಸ್ತ್ರೀಶಕ್ತಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಡಾ|ಎಸ್.ಕುಮಾರ್ ತೆಂಗಿನ ಹಿಂಗಾರ ಅರಳಿಸುವುದರ ಮೂಲಕ ಸಂಪ್ರಾದಾಯಿಕವಾಗಿ ಉದ್ಘಾಟಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯಕ್ರಮಗಳ ಬಗ್ಗೆ ಪ್ರಶಂಸಿಸಿದರು. ಹಾಗೂ ಪೋಷಣ್ ಟ್ರ್ಯಾಕರ್ ಮೂಲಕ ಮಕ್ಕಳ ಬೆಳವಣಿಗೆ ಪರಿಶೀಲಿಸುವ ನಿಖರ ಪ್ರಕ್ರಿಯೆ ಬಗ್ಗೆ ತಿಳಿಸಿದರು.
ಶಿಶು ಅಭಿವೃದ್ಧಿಯೋಜನಾಧಿಕಾರಿ ಶ್ರೀಮತಿ ರಶ್ಮಿ ಕೆ.ಎಂ.ರವರು ಪೋಷಣ್ ಅಭಿಯಾನದ ಕುರಿತು ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಸಮುದಾಯ ಆಧಾರಿತ ಕಾರ್ಯಕ್ರಮವಾದ ಸೀಮಂತವನ್ನು ನಡೆಸಲಾಯಿತು. ಸ್ತ್ರೀಶಕ್ತಿ ಗೊಂಚಲಿನ ಸದಸ್ಯರು ತಯಾರಿಸಿದಂತಹ ಪೌಷ್ಟಿಕ ಆಹಾರ ಸ್ಪರ್ಧೆ ನಡೆಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ| ನಂದಕುಮಾರ್‌ರವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿಶಂಕರ್ , ಸುಳ್ಯ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಅಧ್ಯಕ್ಷೆ ಶ್ರೀಮತಿ ರಶ್ಮಿ ರಜನಿಕಾಂತ್ ಹಾಗೂ ಜಿಲ್ಲಾ ಪಂಚಾಯತ್ ಮ್ಯಾನೇಜರ್ ಮಹೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆಯರು ಪೋಷಣ್ ಅಭಿಯಾನ ಕಾರ್ಯಕ್ರಮದ ಬಗ್ಗೆ ಅನುಭವವನ್ನು ಹಂಚಿಕೊಂಡರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.