Breaking News

ಅಡ್ಕಾರು: ಡಾ. ಬಿ.ಆರ್. ಅಂಬೇಡ್ಕರ್ ರಕ್ಷಣಾ ವೇದಿಕೆ ವತಿಯಿಂದ ಬೃಹತ್ ಗಾಂಧಿನಡಿಗೆ

Advt_Headding_Middle

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನಾಚರಣೆ ಅಂಗವಾಗಿ ಸುಳ್ಯ ತಾಲೂಕು ಡಾ. ಬಿ.ಆರ್. ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಬೃಹತ್ ಗಾಂಧಿ ನಡಿಗೆ ಕಾರ್ಯಕ್ರಮವು ಅ.2ರಂದು ಜಾಲ್ಸೂರು ಗ್ರಾಮದ ಮಾವಿನಕಟ್ಟೆಯಿಂದ ಅಡ್ಕಾರು ಅಂಬೇಡ್ಕರ್ ಭವನದವರೆಗೆ ಜರುಗಿತು.
ಡಾ. ಬಿ.ಆರ್. ಅಂಬೇಡ್ಕರ್ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಅವರು ತೆಂಗಿನಕಾಯಿ ಒಡೆಯುವುದರ ಮೂಲಕ ಗಾಂಧಿನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ತಲುಪಿದ ಗಾಂಧಿನಡಿಗೆಗೆ ಜಾಲ್ಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಂ. ಬಾಬು ಅವರು ಸ್ವಾಗತಿಸಿ, ಬರಮಾಡಿಕೊಂಡರು.
ಬೃಹತ್ ಗಾಂಧಿನಡಿಗೆ ಕಾರ್ಯಕ್ರಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ರಕ್ಷಣಾ ವೇದಿಕೆ ಸುಳ್ಯ ತಾಲೂಕು ಸಮಿತಿ ಅಧ್ಯಕ್ಷ ಮೋಹನ್ ಕುಮಾರ್ ಅಡ್ಕಬಳೆ, ಅಡ್ಕಾರು ಅಂಬೇಡ್ಕರ್ ಸಮಿತಿ ಅಧ್ಯಕ್ಷ ಜಿ. ರಮೇಶ್ ಅಡ್ಕಾರು, ಅಂಬೇಡ್ಕರ್ ರಕ್ಷಣಾ ವೇದಿಕೆ ಕಾರ್ಯದರ್ಶಿ ರಾಜೇಶ್, ಸೇರಿದಂತೆ ರಕ್ಷಣಾ ವೇದಿಕೆಯ ಪದಾಧಿಕಾರಿಗಳು, ಮಹಿಳಾ ಪದಾಧಿಕಾರಿಗಳು, ಜಾಲ್ಸೂರು ಗ್ರಾ.ಪಂ. ಸದಸ್ಯರುಗಳಾದ ಶ್ರೀಮತಿ ಸಂಧ್ಯಾ ವಾಗ್ಲೆ, ವಿಜಯ ಅಡ್ಕಾರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.