Breaking News

ಅಡ್ತಲೆ : ಗಾಂಧಿ ನಡಿಗೆ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ, ಸ್ವಚ್ಚತಾ ಕಾರ್ಯಕ್ರಮ

Advt_Headding_Middle

 

ಸ್ಪಂದನ ಗೆಳೆಯರ ಬಳಗ ಅಡ್ತಲೆ, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಹಾಗೂ ಊರ ಸಾರ್ವಜನಿಕರ ಸಹಭಾಗೀತ್ವದಲ್ಲಿ ಅಡ್ತಲೆಯಲ್ಲಿ ಗಾಂಧಿ ನಡಿಗೆ ಹಾಗೂ ಮಹಾತ್ಮಾ ಗಾಂಧಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಿತು.


ನಿವೃತ್ತ ಯೋಧ ಕಮಲಾಕ್ಷ ಪಿಂಡಿಮನೆಯವರು ಗಾಂಧಿ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು ಒಂದು ಕಿಲೋ ಮೀಟರ್ ಗಾಂಧಿ ನಡಿಗೆಯಲ್ಲಿ ಭಾಗವಹಿಸಿದ ಜನತೆ ಅಡ್ತಲೆ ಶಾಲೆ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮಕ್ಕೆ ಸೇರಿದರು.
ಸಭಾ ಕಾರ್ಯಕ್ರಮ,ಗಾಂಧೀಜಿ ಹಾಗೂ ಶಾಸ್ತ್ರಿಯವರ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಜಯಾ ಲೋಹಿತ್ ಮೇಲಡ್ತಲೆಯವರು ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋಪಾಲಕೃಷ್ಣ ಪಿಂಡಿಮನೆ ವಹಿಸಿದ್ದರು.
ಸೇರಿದ ಗಣ್ಯರು ಹಾಗೂ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಂದ ಪುಷ್ಪಾರ್ಚನೆ ನಡೆಯಿತು. ನಂತರ ಸುಜಯಾ ಲೋಹಿತ್ ಮೇಲಡ್ತಲೆ,ಕಮಲಾಕ್ಷ ಪಿಂಡಿಮನೆ, ಕುಮಾರಿ ಶ್ವೇತ ಅರಮನೆಗಯ, ಮೋಹನ್ ಅಡ್ತಲೆ, ಮಾಧವ ಪೂಜಾರಿಮನೆ ಇವರಿಂದ ಭಾಷಣ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮದ ಪ್ರಮುಖ ಭಾಗ ಗಾಂಧಿ ಸ್ಮೃತಿ ಕಾರ್ಯಕ್ರಮವನ್ನು ಪಂಚಾಯತ್ ಸದಸ್ಯರಾದ ಕೇಶವ ಅಡ್ತಲೆಯವರು ನೆರವೇರಿಸಿ ಗಾಂಧೀಜಿ ಹಾಗೂ ಶಾಸ್ತ್ರಿಯವರ ತತ್ವ, ಆದರ್ಶ, ಸಿದ್ಧಾಂತಗಳನ್ನು ನಾವು ಪಾಲನೆ ಮಾಡಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಸ್ಥ, ಸ್ವಚ್ಛ, ಬಲಿಷ್ಠ ಭಾರತದ ನಿರ್ಮಾಣಕ್ಕೆ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಅಧ್ಯಾಪಕರು, ಶಾಲಾ ವಿದ್ಯಾರ್ಥಿಗಳು, ಸ್ತ್ರೀ ಶಕ್ತಿ ಸಂಘ, ಸ್ವ ಸಹಾಯ ಸಂಘ, ಸ್ಪಂದನ ಗೆಳೆಯರ ಬಳಗ, ನಾಗರಿಕ ಹಿತರಕ್ಷಣಾ ವೇದಿಕೆ ಇವುಗಳ ಸದಸ್ಯರು, ಹಾಗೂ ಊರ ಸಾರ್ವಜನಿಕರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಆರಂಭವಾದ ಸಭೆಗೆ ಸ್ಪಂದನ ಅಧ್ಯಕ್ಷ ವಿನಯ್ ಬೆದ್ರ್ ಪಣೆ ಸ್ವಾಗತಿಸಿ, ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಹರಿಪ್ರಸಾದ್ ಎ. ಕೆ. ವಂದಿಸಿದರು. ರಂಜಿತ್ ಅಡ್ತಲೆ ಕಾರ್ಯಕ್ರಮ ನಿರೂಪಣೆ ಮಾಡಿದರು.

ಸ್ಪಂದನ ಗೆಳೆಯರ ಬಳಗದ ಅಧ್ಯಕ್ಷರಾದ ವಿನಯ್ ಬೆದ್ರುಪಣೆ ಸ್ವಾಗತಿಸಿ, ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ವಂಡಿಸಿದರು ಮತ್ತು ರಂಜಿತ್ ಅಡ್ತಲೆ ಕಾರ್ಯಕ್ರಮ ನಿರೂಪಣೆ ಮಾಡಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.