Breaking News

ಬೆಳ್ಳಾರೆ ಗ್ರಾಮ ಪಂಚಾಯತ್ ವತಿಯಿಂದ ಗಾಂಧಿ ಜಯಂತಿ ಆಚರಣೆ

Advt_Headding_Middle

 

ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆವರೆಗೆ ಗಾಂಧಿ ನಡಿಗೆ

ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ಳಾರೆ ಗ್ರಾಮ ಪಂಚಸಯತ್ ವತಿಯಿಂದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆಯನ್ನು ಅ.2 ರಂದು ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಲ್ಲಿ ಆಚರಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ದೀಪ ಬೆಳಗಿಸಿ ,ಮಹಾತ್ಮ ಗಾಂಧೀಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ ಗಾಂಧೀಜಿಯವರ ಗ್ರಾಮಸ್ವರಾಜ್ಯದ ಕಲ್ಪನೆಯ ಬಗ್ಗೆ ಮತ್ತು ಅವರ ಆದರ್ಶಗಳ ಬಗ್ಗೆ ಮಾತನಾಡಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಗೌರಿ ನೆಟ್ಟಾರು,ಸದಸ್ಯರಾದ ಇಕ್ಬಾಲ್ ಬೆಳ್ಳಾರೆ, ದಿನೇಶ್ಚಂದ್ರ ಹೆಗ್ಡೆ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೆಳ್ಳಾರೆ ಜೇಸೀ ಅಧ್ಯಕ್ಷ ಪದ್ಮನಾಭ ಕಲಾಸುಮ , ಆರೋಗ್ಯ ಇಲಾಖೆಯ ಲೋಕೇಶ್ ತಂಟೆಪ್ಪಾಡಿ, ಅಂಗನವಾಡಿ ಕಾರ್ಯಕರ್ತೆಯರು, ಕೆ.ಪಿಎಸ್.ಶಾಲಾ ಮುಖ್ಯ ಗುರು ಮಾಯಿಲಪ್ಪ ಹಾಗೂ ಗ್ರಾಮಸ್ಥರು ಪಂಚಾಯತ್ ಲೆಕ್ಕ ಸಹಾಯಕಿ ಶ್ರೀಮತಿ ಸುಶೀಲ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅನುಷಾರವರು ಸ್ವಾಗತಿಸಿ,ಪ್ರಾಸ್ತಾವಿಕ ಮಾತನಾಡಿದರು.

ಗಾಂಧಿ ನಡಿಗೆ

ಬೆಳ್ಳಾರೆ ರಾಜೀವ ಗಾಂಧಿ ಸೇವಾ ಕೇಂದ್ರದಿಂದ ಐತಿಹಾಸಿಕ ಸ್ಥಳ ಬ್ರಿಟಿಷರ ಖಜಾನೆ ಇದ್ದ ಜಾಗ ಬಂಗ್ಲೆಗುಡ್ಡೆಯವರೆಗೆ ಗಾಂಧಿ ನಡಿಗೆ ನಡೆಯಿತು.

ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ

ಗಾಂಧಿನಡಿಗೆ ನಡೆದ ಬಳಿಕ ಪೇಟೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಪೇಟೆಯಲ್ಲಿರುವ ಕಸ,ಪ್ಲಾಸ್ಟಿಕ್ ಗಳನ್ನು ಹೆಕ್ಕಿ ಶುಚಿಗೊಳಿಸಲಾಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.