Breaking News

ಕನಕಮಜಲು: ಗಾಂಧಿ ಜಯಂತಿ ಪ್ರಯುಕ್ತ ವಿಶೇಷ ಗ್ರಾಮಸಭೆ

Advt_Headding_Middle

ಗ್ರಾಮೀಣಾಭಿವೃಧ್ಧಿ ಮತ್ತು ಪಂಚಾಯತ್ ರಾಜ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಸುಳ್ಯ ತಾಲ್ಲೂಕು ಪಂಚಾಯತ್, ಕನಕಮಜಲು ಗ್ರಾಮ ಪಂಚಾಯತ್ ವತಿಯಿಂದ “ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಆಜಾದಿ ಕಾ ಅಮೃತ ಮಹೋತ್ಸವ ಆಂದೋಲನದ ಮತ್ತು ಗಾಂಧಿ ಜಯಂತಿ ಅಂಗವಾಗಿ ಸ್ವಚ್ಛತಾ ಹಿ ಸೇವಾ ಹಾಗೂ ಸ್ವಚ್ಛತಾ ಕಾರ್ಯಕ್ರಮ ಸ್ವಚ್ಛತಾ ಜಾಥಾ ಮತ್ತು ಸಬ್ ಕಿ ಯೋಜನಾ ಸಬ್ ಕಾ ವಿಕಾಸ್ ಯೋಜನೆಯಡಿ ” ನಮ್ಮ ಗ್ರಾಮ ನಮ್ಮ ಯೋಜನೆ” ಅಂಗವಾಗಿ ದೂರ ಧೃಷ್ಠಿ ಯೋಜನೆ ತಯಾರಿಕೆ, ಉದ್ಯೋಗ ಖಾತರಿ ಯೋಜನೆಯ 100 ದಿನಗಳ ಸೋಕ್ ಪಿಟ್ ಅಭಿಯಾನದ ವಿಶೇಷ ಗ್ರಾಮ ಸಭೆಯು ಕನಕಮಜಲು ಗ್ರಾಮ ಪಂಚಾಯತಿ ಸಭಾಭವನದಲ್ಲಿ ಅ.2ರಂದು ಜರುಗಿತು.
ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ ಕುತ್ಯಾಳ ಅವರು ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ, ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ “ಓ.ಡಿ.ಎಫ್” ಫಲಕ ಅನಾವರಣ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾ. ಪಂ‌ ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್, ಸದಸ್ಯರುಗಳಾದ ರವಿಚಂದ್ರ ಕಾಪಿಲ, ಇಬ್ರಾಹಿಂ ಕಾಸಿಂ‌ ಕನಕಮಜಲು, ಶ್ರೀಮತಿ ಶಾರದಾ ಉಗ್ಗಮೂಲೆ, ಶ್ರೀಮತಿ ಪ್ರೇಮಲತಾ ಪಂಜಿಗುಂಡಿ, ಶ್ರೀಮತಿ ಸುಮಿತ್ರ ಕುತ್ಯಾಳ ಸೇರಿದಂತೆ
ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ನಾಗರಿಕರು ಉಪಸ್ಥಿತರಿದ್ದರು. ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸಹಕರಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.