ದುಗಲಡ್ಕದಲ್ಲಿ ಗಾಂಧಿ ಜಯಂತಿ ಆಚರಣೆ

Advt_Headding_Middle

 

ಗಾಂಧೀಜಿ ಸರ್ವಧರ್ಮವನ್ನು ಪ್ರೀತಿಸಿ,ಅಹಿಂಸೆಯನ್ನು ಪ್ರತಿಪಾದಿಸಿದರು- ಡಾ.ಪ್ರಭಾಕರ ಶಿಶಿಲ

ದುಗಲಡ್ಕದ ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗಲಡ್ಕ ಇದರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ರೋಟರಿ ಕ್ಲಬ್ ನ ಸಹಯೋಗ ದೊಂದಿಗೆ ಸುದ್ದಿ ಬಿಡುಗಡೆ ಸಮೂಹ ಸಂಸ್ಥೆಗಳ ಆಶ್ರಯದಲ್ಲಿ ಗಾಂಧಿ ಜಯಂತಿಯನ್ನು ದುಗಲಡ್ಕ ಪ್ರೌಢಶಾಲಾ ವಠಾರದಲ್ಲಿ ನಡೆಯಿತು.
ಮಹಾತ್ಮಾ ಗಾಂಧಿಯವರ ಭಾವ ಚಿತ್ರದ ಮುಂದೆ ದೀಪ ಬೆಳಗುವುದರೊಂದಿಗೆ ಬೆಳ್ಳಾರೆ ವರ್ತಕರ ಸಂಘದ ಅಧ್ಯಕ್ಷ ಮಾಧವ ಗೌಡ ಕಾಮಧೇನು ಉದ್ಘಾಟಿಸಿದರು.ಗಾಂಧೀಜಿಯವರಿಗೆ ನುಡಿ ನಮನ ಸಲ್ಲಿಸಿ ಮಾತನಾಡಿದ ಸುಳ್ಯ ಎನ್ನೆಂಸಿಯ ವಿಶ್ರಾಂತ ಪ್ರಾಂಶುಪಾಲ ಡಾ.ಪ್ರಭಾಕರ ಶಿಶಿಲರವರು ಗಾಂಧೀಜಿ ಎಲ್ಲರನ್ನು ಒಗ್ಗೂಡಿಸುವ ಕೆಲಸ ಮಾಡಿದರು.ಸರ್ವಧರ್ಮವನ್ನು ಪ್ರೀತಿಸಿ ಅಹಿಂಸೆಯನ್ನು ಪ್ರತಿಪಾದಿಸಿದರು.ಶಾಂತಿ ,ನೆಮ್ಮದಿಯನ್ನು ಕೊಡುವ ಕೆಲಸ ಮಾಡಿದರು.ಎಂದು ಹೇಳಿದರು.
ಸಭಾಧ್ಯಕ್ಷತೆಯನ್ನು ಕುರಲ್ ತುಳುಕೂಟದ ಅಧ್ಯಕ್ಷ ನಾರಾಯಣ ಟೈಲರ್ ವಹಿಸಿದ್ದರು.
ಮಲೆನಾಡು ಸಿರಿ ಪ್ರಶಸ್ತಿ ಪುರಸ್ಕೃತರಾದ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು.ರವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.
ಮುಖ್ಯ ಅತಿಥಿಗಳಾಗಿ ನ.ಪಂ.ಸದಸ್ಯೆ ಶ್ರೀಮತಿ ಶಶಿಕಲಾ ನೀರಬಿದಿರೆ, ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ,ಸುಳ್ಯ ರೋಟರಿ ಕ್ಲಬ್ ಖಜಾಂಚಿ ರೊ.ಪ್ರಸನ್ನ ಕಲ್ಲಾಜೆ ಉಪಸ್ಥಿತರಿದ್ದರು.
ಮಿತ್ರ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಕೊಯಿಕುಳಿ,ಕಾರ್ಯದರ್ಶಿ ಅಕ್ಷಯ್ ಮೂಡೆಕಲ್ಲು, ಕೋಶಾಧಿಕಾರಿ ಚಿದಾನಂದ ಕೊಯಿಕುಳಿ,ಕುರಲ್ ತುಳುಕೂಟದ ಖಜಾಂಚಿ ಮನೋಜ್ ಪಾನತ್ತಿಲ ಉಪಸ್ಥಿತರಿದ್ದರು.
ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುದ್ದಿ ವರದಿಗಾರ ರಮೇಶ್ ನೀರಬಿದಿರೆ ಸ್ವಾಗತಿಸಿ, ಯುವಕ ಮಂಡಲದ ಗೌರವಾಧ್ಯಕ್ಷ ಭವಾನಿಶಂಕರ ಕಲ್ಮಡ್ಕ ವಂದಿಸಿದರು.ಕುರಲ್ ತುಳುಕೂಟದ ಕಾರ್ಯದರ್ಶಿ ನವ್ಯ ದಿನೇಶ್ ಕಾರ್ಯಕ್ರಮ ನಿರೂಪಿಸಿದರು.ಬಳಿಕ ಗಾಂಧಿ ನಡಿಗೆ ನಡೆಯಿತು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.