Breaking News

ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ

Advt_Headding_Middle

 

ಪ್ರಾಥಮಿಕ ವಿಭಾಗದಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತ ಕಂಡ ಮಹಾನ್ ನಾಯಕರುಗಳಾದ ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಇವರುಗಳ ಜನ್ಮದಿನಾಚರಣೆಯನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಥಮಿಕ ವಿಭಾಗದಲ್ಲಿ ಅ 2 ರಂದು ಆಚರಿಸಲಾಯಿತು.
ಶಾಲಾ ಮುಖ್ಯ ಗುರುಗಳಾದ ಮಾಯಿಲಪ್ಪರವರು ಸ್ವಾಗತಿಸಿ, ಗಾಂಧೀಜಿಯ ರಾಮರಾಜ್ಯದ ಕನಸು ಹಾಗೂ ಗ್ರಾಮ ಸ್ವರಾಜ್ಯದ ಕಲ್ಪನೆಯ ಬಗ್ಗೆ ಮಾತನಾಡಿದರು.
ಶಾಲಾ ಎಸ್‌ಡಿಎಂಸಿ ಅಧ್ಯಕ್ಷರಾದ ಕೇಶವ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಸರಣಾ ವಿಭಾಗದ ಮುಖ್ಯಸ್ಥ ಗಣೇಶ್ ಕುಕ್ಕುದಡಿಯವರು ಗಾಂಧೀಜಿಯವರ ಭಾವಚಿತ್ರ ಮತ್ತು ಲಾಲ್ ಬಹದ್ದೂರು ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಣೆ ಮಾಡಿದರು.
ಕಾರ್ಯಕ್ರಮದಲ್ಲಿ ಗಾಂಧಿ ಸ್ಮೃತಿ ಮತ್ತು ಸರ್ವಧರ್ಮ ಪ್ರಾರ್ಥನೆಗಳನ್ನು ನಡೆಸಲಾಯಿತು.
ಗಾಂಧೀಜಿ ಮತ್ತು ಶಾಸ್ತ್ರಿಯವರ ಜೀವನ ಹಾಗೂ ಹೋರಾಟಗಳನ್ನು ಸ್ಮರಿಸಿಕೊಳ್ಳಲಾಯಿತು. ಶಾಲಾ ಶಿಕ್ಷಕ ವೃಂದ, ಪೋಷಕರು ಮತ್ತು ಆಯ್ದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.