Breaking News

ಸುಳ್ಯ: ನೆಹರೂ ಮೆಮೋರಿಯಲ್ ಕಾಲೇಜು ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಕಾಲ್ನಡಿಗೆ ಜಾಥಾ

Advt_Headding_Middle

 

 

ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್ ಕ್ರಾಸ್, ಎನ್ ಎಸ್ ಎಸ್, ಎನ್ ಸಿ ಸಿ, ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಕಾಲ್ನಡಿಗೆ ಜಾಥಾ ಕಾರ್ಯಕ್ರಮವನ್ನು ಅಕ್ಟೋಬರ್ 2ರಂದು ಹಮ್ಮಿಕೊಳ್ಳಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ (ರಿ) ಸುಳ್ಯ, ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರು ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಜಾಥಾವನ್ನು ಹಸಿರು ನಿಶಾನೆ ತೋರಿಸುವ ಮೂಲಕ ಉದ್ಘಾಟಿಸಿ ಮಾತನಾಡಿ, ಗಾಂಧೀಜಿಯವರ ತತ್ವಾದರ್ಶಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಂಡಾಗ ಸದೃಢ ಭಾರತದ ನಿರ್ಮಾಣ ಸಾಧ್ಯ ಎಂದರು. ಕೆವಿಜಿ ಕ್ಯಾಂಪಸ್ ನ ಡಾ. ಕೆವಿಜಿ ಪ್ರತಿಮೆ ಬಳಿಯಿಂದ ಆರಂಭಗೊಂಡ ಜಾಥಾವು ಸುಳ್ಯ ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ಡಾ. ಕೆವಿಜಿ ಪ್ರತಿಮೆಯ ಬಳಿ ಸಮಾಪನಗೊಂಡಿತು. ಕಾಲೇಜಿನ ಶೈಕ್ಷಣಿಕ ಸಲಹೆಗಾರ ಪ್ರೊ. ಬಾಲಚಂದ್ರ ಗೌಡ. ಎಂ ಹಾಗೂ ಕಾಲೇಜಿನ ಪ್ರಾಂಶುಪಾಲ ರುದ್ರಕುಮಾರ್ ಎಂ ಎಂ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಯುವ ರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ. ಅನುರಾಧಾ ಕುರುಂಜಿ ಕಾರ್ಯಕ್ರಮ ನಿರ್ವಹಿಸಿದರು. ಎನ್ ಎಸ್ ಎಸ್ ಘಟಕಾಧಿಕಾರಿ ಸಂಜೀವ ಕುದ್ಪಾಜೆ, ಎನ್ ಸಿ ಸಿ ಅಧಿಕಾರಿ ಲೆ. ಸೀತಾರಾಮ ಎಂ ಡಿ, ರೇಂಜರ್ ಘಟಕದ ಕಾರ್ಯಕ್ರಮಾಧಿಕಾರಿ ಹರ್ಷಕಿರಣ ಕಾಲೇಜಿನ ಬೋಧಕ – ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಕಾಲೇಜಿನ ಯುವ ರೆಡ್ ಕ್ರಾಸ್, ಎನ್ ಎಸ್ ಎಸ್, ಎನ್ ಸಿ ಸಿ, ರೋವರ್ಸ್- ರೇಂಜರ್ಸ್ ಘಟಕದ ಸುಮಾರು 250 ಕ್ಕೂ ಅಧಿಕ ವಿದ್ಯಾರ್ಥಿಗಳು ಜಾಥಾದಲ್ಲಿ ಭಾಗವಹಿಸಿದರು.

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

About The Author

Related posts

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.

Copy Protected by Chetan's WP-Copyprotect.